Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಗೊಂದಲವಿಲ್ಲದೆ ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

ಗೊಂದಲವಿಲ್ಲದೆ ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

ಸುದ್ದಿಕಿರಣ ವರದಿ
ಸೋಮವಾರ, ಮಾರ್ಚ್ 28

ಗೊಂದಲವಿಲ್ಲದೆ ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭಗೊಂಡಿದ್ದು, ಏ. 11ರ ವರೆಗೆ ನಡೆಯಲಿದೆ.

ಜಿಲ್ಲೆಯಲ್ಲಿ ಸುಮಾರು 14 ಸಾವಿರ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 58 ಕೇಂದ್ರಗಳನ್ನು ತೆರೆಯಲಾಗಿದೆ. ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದೆ ಪರೀಕ್ಷೆ ನಡೆಯಿತು. ಕೋವಿಡ್ ನಿಯಮಗಳನ್ನು ಅನುಸರಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಜಿ. ಪಂ. ಸಿಇಓ ಡಾ. ನವೀನ ಭಟ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆಯುವಂತೆ ಸಲಹೆ ನೀಡಿ ಶುಭ ಹಾರೈಸಿದರು.

ಜಿಲ್ಲಾಧಿಕಾರಿ ನಗರದ ಬೋರ್ಡ್ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅವರು ವಳಕಾಡು ಸರಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಇಂದು 210 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!