Thursday, July 7, 2022
Home ಲೋಕಾಭಿರಾಮ ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ ಶಿಬಿರ

ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ ಶಿಬಿರ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಉಡುಪಿ, ಜು. 10: ಚಿಟ್ಪಾಡಿ ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಈಚೆಗೆ ಲಸಿಕೆ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರವನ್ನು ಸಂಸ್ಥೆ ಸಂಚಾಲಕ ಫಾ. ಚಾರ್ಲ್ಸ್ ಮಿನೆಜಸ್ ಉದ್ಘಾಟಿಸಿದರು. 97 ಮಂದಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಮೊದಲ ಡೋಸ್ ವ್ಯಾಕ್ಸಿನೇಷನ್ ನೀಡಲಾಯಿತು.

ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಕಳೆದ ಹಲವು ವರ್ಷದಿಂದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುತ್ತಿದೆ.

ಈ ಸಂದರ್ಭದಲ್ಲಿ ಪ್ರಾಂಶುಪಾಲ ವಿಜಯ್ ಡಿ’ಸೋಜಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್ ಭಟ್, ಲಸಿಕಾ ಶಿಬಿರ ಅಧಿಕಾರಿ ಸುಪ್ರಸಾದ್ ಶೆಟ್ಟಿ, ಉಡುಪಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೀನಾಕ್ಷಿ ಮತ್ತು ಮಾಲತಿ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!