ಅಂಗಡಿ ಮಳಿಗೆಗಲ ಮೇಲೆ ಪುರಸಭೆ ದಾಳಿ-23 ಕೆಜಿ ಪ್ಲಾಸ್ಟಿಕ್ ವಶಕ್ಕೆ

ಅಂಗಡಿ ಮಳಿಗೆಗಲ ಮೇಲೆ ಪುರಸಭೆ ದಾಳಿ-23 ಕೆಜಿ ಪ್ಲಾಸ್ಟಿಕ್ ವಶಕ್ಕೆ

ಅಂಗಡಿ ಮಳಿಗೆಗಲ ಮೇಲೆ ಪುರಸಭೆ ದಾಳಿ-23 ಕೆಜಿ ಪ್ಲಾಸ್ಟಿಕ್ ವಶಕ್ಕೆ

ಬಾಗೇಪಲ್ಲಿ: ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಾಗೇಪಲ್ಲಿ ಪುರಸಭೆ ಮುಖ್ಯಧಿಕಾರಿ ರುದ್ರಮ್ಮ ಶರಣಪ್ಪ ಮತ್ತು ಸಿಬ್ಬಂದಿ ಪಟ್ಟಣದಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ. ಪಟ್ಟಣದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹಂತ ಹಂತವಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಕ್ಕೆ ಪಡೆಯುವ ಜತೆಗೆ ದಂಡ ಪ್ರಯೋಗಕ್ಕೂ ಮುಂದಾಗಿದ್ದಾರೆ. ಬಾಗೇಪಲ್ಲಿ ಪಟ್ಟಣದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳ ಮೇಲೆ ಕಾರ್ಯಾಚರಣೆ ನಡೆಸಿ 23 ಕೆ ಜಿ ಗೂ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್‌ ಕವರ್‌, ಗ್ಲಾಸ್‌(ನೀರಿನ ಲೋಟ)ಸೇರಿದಂತೆ ಮತ್ತಿತರ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪ  ಸುದ್ದಿಗಾರರೊಂದಿಗೆ ಮಾತನಾಡಿ, ''ವರ್ತಕರು ಹಾಗೂ ಸಾರ್ವಜನಿಕರ ಗಮನ ಸೆಳೆಯಲು ಪುರಸಭೆ ವತಿಯಿಂದ ಕೆಲ ತಿಂಗಳಿಂದ ಹಲವು ರೀತಿಯ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ನಿರಂತರವಾಗಿ ನಡೆಯುತ್ತಲೇ ಇದೆ. ಸಾರ್ವಜನಿಕರು ಹಾಗೂ ವರ್ತಕರಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ಸಿಗುತ್ತಿಲ್ಲ,'' ಎಂದು ವಿಷಾದ ವ್ಯಕ್ತಪಡಿಸಿದರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲು ಗಂಭೀರ ಚಿಂತನೆ ನಡೆಸಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ವಸ್ತುಗಳ ತಯಾರಿಕೆ, ಮಾರಾಟ, ಬಳಕೆ, ದಾಸ್ತಾನು ಇಡುವುದು, ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು. ಈ ಸಂಧರ್ಭದಲ್ಲಿ ಇನಾಯೀತುಲ್ಲ ಖಾನ್, ಮಹಮ್ಮದ್ ಪೀರ್, ರಮೇಶ್, ಅಮರ ನಾರಾಯಣ,ಬಾಷ,ಪೌರ ಕಾರ್ಮಿಕರಾದ ನಾಗರಾಜು,ಅಶೋಕ್, ಅಳಿಸಾಬ್, ನಾರಾಯಣ ಸ್ವಾಮಿ, ರಮೇಶ್ ಸೇರಿದಂತೆ ಇತರೆ ಸಿಬ್ಬಂದಿ ವರ್ಗದವರು ಇದ್ದರು.