ಅಂತಾರಾಷ್ಟ್ರೀಯ ತ್ರೋಬಾಲ್ ಸಾಧನೆ: ಪೃಥ್ವಿ ಶೆಟ್ಟಿಗೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಸನ್ಮಾನ
80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಮಾನುಜ ರಸ್ತೆಯಲ್ಲಿನ ಶ್ರೀ ಶಿವರಾತ್ರೀಶ್ವರ ಅಟೋ ಮಾಲಿಕರ ಮತ್ತು ಚಾಲಕರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ರಾಮಾನುಜ ರಸ್ತಯ ನಿವಾಸಿ ಪ್ರವೀಣ್ ಶೆಟ್ಟಿ ಅವರ ಪುತ್ರಿ ಖ್ಯಾತ ಯುವ ಕ್ರೀಡಾಪಟು ಪೃಥ್ವಿ ಶೆಟ್ಟಿ ಅವರು ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಾಂಪಿಯನ್ ಶಿಪ್ ನಲ್ಲಿ ವಿಜೇತರು ಗಿದ್ದಾರೆ ಇವರಿಗೆ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಅವರು ಗೌರವಿಸಿ ಸನ್ಮಾನಿಸಿದರು
ಈ ಸಂದರ್ಭದಲ್ಲಿ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್,. ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ, ಮಾಜಿ ನಗರಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ಸಮಾಜ ಸೇವಕರಾದ ಪ್ರವೀಣ್ ಶೆಟ್ಟಿ, ಗೋಲ್ಡ್ ಸುರೇಶ್, ಗುಣಶೇಖರ್, ಇನ್ನಿತರರು ಉಪಸ್ಥಿತರಿದ್ದರು