ಆರೋಗ್ಯದ ಕಡೆ ಇರಲಿ ಗಮನ: ಕೆ.ರಾಜಶೇಖರ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

Sep 23, 2025 - 18:15
Sep 23, 2025 - 18:20
 0  4
ಆರೋಗ್ಯದ ಕಡೆ ಇರಲಿ ಗಮನ: ಕೆ.ರಾಜಶೇಖರ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಕನಕಗಿರಿ: ಆರೋಗ್ಯವೇ ಮಹಾಭಾಗ್ಯ, ಪ್ರತಿನಿತ್ಯ ಒಂದಿಲ್ಲೊಂದು ಕೆಲಸದಲ್ಲಿ ತೊಡಗುವ ನಮ್ಮ ಗ್ರಾ.ಪಂ ಸಿಬ್ಬಂದಿಗಳು ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು ಎಂದು ತಾ.ಪಂ ಇಓ ಕೆ.ರಾಜಶೇಖರ ಹೇಳಿದರು.

ಅವರು ತಾ.ಪಂ ಸಭಾಂಗಣದಲ್ಲಿ ಮಂಗಳವಾರ ತಾ.ಪಂ ಹಾಗೂ ಗ್ರಾ.ಪಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಸೇವೆಯಲ್ಲಿ ಹಾಗೂ ಕೆಲಸದ ಒತ್ತಡದಲ್ಲಿ ನೌಕರರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವಲ್ಲಿ ವಿಫಲರಾಗಿರುತ್ತಾರೆ. ಹಾಗಾಗಿ ಅವರಿಗೋಸ್ಕರ ಪ್ರತಿ ವರ್ಷ ಉಚಿತ ಆರೋಗ್ಯ ತಪಾಸಣೆಯನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಶಿಬಿರದಲ್ಲಿ ಅವರಿಗೆ ಬಿಪಿ, ಶುಗರ್ ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳನ್ನು ತಪಾಸಣೆ ಮಾಡಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ಪ್ರತಿಯೊಬ್ಬ ಸಿಬ್ಬಂದಿಯೂ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.



ನಂತರ ತಹಶೀಲ್ದಾರ್ ವಿಶ್ವನಾಥ ಮುರುಡಿ, ಸಿಡಿಪಿಓ ವಿರೂಪಾಕ್ಷಿ ಅವರು ಸೇರಿದಂತೆ ಅನೇಕ ಅಧಿಕಾರಿಗಳು, ಸಿಬ್ಬಂದಿಗಳು ಕೂಡ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು.

ಈ ಸಂದರ್ಭದಲ್ಲಿ ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ ಸಿಬ್ಬಂದಿಗಳು, ಗ್ರಾ.ಪಂ ನೌಕರರು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0