ಉತ್ತಮ ಸಮಾಜ ಕಟ್ಟುವಲ್ಲಿಶಿಕ್ಷಣ ಬಹಳ ಮುಖ್ಯ  ಶಿಕ್ಷಣ

Feb 5, 2026 - 13:31
 0  3
ಉತ್ತಮ ಸಮಾಜ ಕಟ್ಟುವಲ್ಲಿಶಿಕ್ಷಣ ಬಹಳ ಮುಖ್ಯ  ಶಿಕ್ಷಣ

       ಮುಸ್ಸಂಜೆ ಸಮಯ ಚಾಮರಾಜನಗರ : ತಾಲೋಕಿನ ಬಸವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಸಂಪನ್ಮೂಲಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಇಲಾಖೆ  ಸಂತೆಮರಹಳ್ಳಿ ಕ್ಲಸ್ಟರ್ ಹಂತದ ಎಫ್ ಎಲ್ ಆಧಾರಿತ ಕಲಿಕಾ ಹಬ್ಬ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಮುಖಂಡ ಶಂಕರ್ ಮೂರ್ತಿ ಮಾತನಾಡಿ  ಮಕ್ಕಳು ಕಲಿಕೆಯ ಜೊತೆಗೆ ಇನ್ನಿತರ ಚಟುವಟಿಕೆಗಳನ್ನ ಬೆಳಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಪೋಷಕರು ವಿದ್ಯಾರ್ಥಿಗಳನ್ನ ಖಾಸಗಿ ಮಕ್ಕಳನ್ನ ಖಾಸಗಿ ಶಾಲೆಗಳಿಗೆ ಸೇರಿಸುವ ಪ್ರಕ್ರಿಯೆ ಜಾಸ್ತಿಯಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ ಆದರೆ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ  ಗುಣಮಟ್ಟದ  ಶಿಕ್ಷಣ ನೀಡುವಂತ ಶಾಲೆಗಳಿವೆ ಶಾಲೆಗಳಿವೆ ಇದರ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಿ ಸಲಹೆ ನೀಡಿದರು.

ಉತ್ತಮ ಸಮಾಜ ಕಟ್ಟಲು  ವಿದ್ಯಾರ್ಥಿಗಳು ಶಿಕ್ಷಣವನ್ನು ಬಳಸಿಕೊಂಡು ಮುಂದಾಗಬೇಕು ಹಾಗೂ ಸರ್ಕಾರಿ ಶಾಲೆಗನ್ನ ಉಳಿಸುವ ನಿಟ್ಟಿನಲ್ಲಿ ಪೋಷಕರ ಸಹಕಾರ ಅತ್ಯಗತ್ಯ ಎಂದರು.

ಈ ಬಳಿಕ ಸಂತೆಮರಹಳ್ಳಿ ಸಿಆರ್ ಪಿ ಶಿವಕುಮಾರ್ ಮಾತನಾಡಿ  ಶಿಕ್ಷಕರು ಮತ್ತು ಮಕ್ಕಳ ನಡುವೆ ಇರುವಂತ ಭಾಂದವ್ಯ ಅತ್ಯುತ್ತಮ  ಎಂದರು.
ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ  ಪ್ರತಿಭೆಯನ್ನು ತೋರಿಸಲು ಶಿಕ್ಷಕರು ಸಹಕರಿಯಾಗುತ್ತಾರೆ ಸರ್ಕಾರದಿಂದ  ಬರುವಂತಹ ಸೌಲಭ್ಯಗಳನ್ನು ಸದ್ಭಾಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ನೀಡುವಲ್ಲಿ ಮುಂದಾಗಬೇಕು ಸಲಹೆ ನೀಡಿದರು. 

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷೆ ನಿರ್ಮಲಾ, ತಾಲೋಕು ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ರಾಮಸ್ವಾಮಿ ಮುಖಂಡರಾದ ಮಲ್ಲೇಶಪ್ಪ, ಶಿವಯ್ಯ, ಬಸವಣ್ಣ , ಹಾಗೂ ಸಂತೆಮರಹಳ್ಳಿ ಬಿಆರ್ ಪಿ ಸವಿತಾ, ಚಂದ್ರು ಸೇರಿದಂತೆ ಅಕ್ಕಪಕ್ಕ ಶಾಲೆಯಲ್ಲಿ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456