ಎಸ್.ಎಸ್.ಎಲ್.ಸಿ ಫಲಿತಾಂಶ: ಭವಾನಿ ಶಾಲೆಗೆ ನೂರಕ್ಕೆ ನೂರು ಫಲಿತಾಂಶ; ಹಾರಿಕ ರೆಡ್ಡಿ ತಾಲ್ಲೂಕಿಗೆ ಪ್ರಥಮ

Apr 24, 2026 - 17:25
 0  2
ಎಸ್.ಎಸ್.ಎಲ್.ಸಿ ಫಲಿತಾಂಶ: ಭವಾನಿ ಶಾಲೆಗೆ ನೂರಕ್ಕೆ ನೂರು ಫಲಿತಾಂಶ; ಹಾರಿಕ ರೆಡ್ಡಿ ತಾಲ್ಲೂಕಿಗೆ ಪ್ರಥಮ

       ​ಬೇತಮಂಗಲ: ಇತ್ತೀಚೆಗೆ ಪ್ರಕಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೆಜಿಎಫ್ ತಾಲ್ಲೂಕಿನ ಶ್ರೀ ಭವಾನಿ ಇಂಟರ್ನ್ಯಾಷನಲ್ ,  ಶಾಲೆಯ ವಿದ್ಯಾರ್ಥಿನಿ ಹಾರಿಕ ರೆಡ್ಡಿ ಅವರು  621(99.3%) ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿ ಭಾಸ್ಕರ್ ಹೇಳಿದರು. 

ಶಾಲೆಯ ಆವರಣದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು, ಶ್ರೀ ಭವಾನಿ ಇಂಟರ್ನ್ಯಾಷನಲ್ ಶಾಲೆಯು ಅಭೂತಪೂರ್ವ ಸಾಧನೆ ಮಾಡಿದೆ, ಶೇ. 100 ರಷ್ಟು ಫಲಿತಾಂಶವನ್ನು ದಾಖಲಿಸಿದೆ, ಶಾಲೆಯ ಸತತ ಶ್ರಮ ಮತ್ತು ವಿದ್ಯಾರ್ಥಿಗಳ ಶಿಸ್ತಿನ ಅಧ್ಯಯನದ ಫಲವಾಗಿ  ಶಾಲೆಯು ತನ್ನ ಯಶಸ್ಸಿನ ಪಥವನ್ನು ಮುಂದುವರಿಸಿದೆ. ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಶಾಲೆಯ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ತಿಳಿಸಿದರು. 

ಆಡಳಿತಾಧಿಕಾರಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಪೋಷಕರ ಸಹಕಾರ ಮತ್ತು ಶಿಕ್ಷಕರ ನಿರಂತರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಮ್ಮ ಸಂಸ್ಥೆ ಎಂದಿಗೂ ಬದ್ಧವಾಗಿದೆ ಮುಂದಿನ ದಿನಗಳಲ್ಲಿ ಈ ಎಲ್ಲಾ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ತಿಳಿಸಿದರು. 

ಒಟ್ಟು ಫಲಿತಾಂಶ: ಹಾರಿಕ ರೆಡ್ಡಿ 
ಶೇ. (99,3) ಕುಂದಾನ (96,3) ಅನುಷಾ (94, 2) ಕೆ ಭಾವನ, (94,8) ತನುಶ್ರೀ (93,12) ಚಂದನ (92.80) ಜಸ್ಮಿತ, (90.40) ಕೀರ್ತನ (89,28) ಸೋಫಿಯ ಸುಲ್ತಾನ (87,52) ಮೌನಿಕ (86, 56)  ಶೇಕಡಾ 100 ರಷ್ಟು ಫಲಿತಾಂಶ ಪಡೆದಿರುತ್ತದೆ. 

ವಿದ್ಯಾರ್ಥಿಗಳಿಗೆ ಗೌರವ: ಶ್ರೀ ಭವಾನಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದಿದ್ದು ಸಾಧನಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು. 

ಪೋಷಕರ ಸಹಕಾರ:  ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ನರಾಗಲು ಶಿಕ್ಷಕರ ಪರಿಶ್ರಮದಷ್ಟೇ ಪೋಷಕರ ಸಂಪೂರ್ಣ ಸಹಕಾರ ಬೆಂಬಲವೇ ನಮ್ಮ ಸಂಸ್ಥೆಗೆ ಬಲ ಎಂದರು

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಅಧಿಕಾರಿಗಳಾದ ಭಾಸ್ಕರ್, ಮಂಜುನಾಥ್, ಮುಕ್ಯೋಪಾಧ್ಯಾಯ ನರಸಿಂಹ ಮೂರ್ತಿ ಪೋಷಕರಾದ ಬಿ ಆರ್ ಪಿ ಶಂಕರ್ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456