ಐಕನಹಳ್ಳಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾರವಿ ಅವಿರೋಧವಾಗಿ ಆಯ್ಕೆಗೊಂಡರು

Oct 23, 2025 - 15:09
 0  6
ಐಕನಹಳ್ಳಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾರವಿ ಅವಿರೋಧವಾಗಿ ಆಯ್ಕೆಗೊಂಡರು

  ಚನ್ನರಾಯಪಟ್ಟಣ:  ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕು ಕಿಕ್ಕೇರಿ ಹೋಬಳಿಯ ಐಕನಹಳ್ಳಿ ಗ್ರಾಮ ಪಂಚಾಯಿತಿಯ ನಿಕಟ ಪೂರ್ವ ಉಪಾಧ್ಯಕ್ಷರಾದ ವಿರಾಜುರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಈ ದಿನ ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಸಾಸಲು ಗ್ರಾಮದ ಸದಸ್ಯರಾದ ಕವಿತಾ ರವಿಯವರ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಕವಿತಾ ರವಿ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆಂದು ಚುನಾವಣಾ ಅಧಿಕಾರಿಗಳು ಘೋಷಣೆ ಮಾಡಿದರು. 

ನೂತನ ಉಪಾಧ್ಯಕ್ಷರನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ ಎನ್ ಪುಟ್ಟಸ್ವಾಮಿಗೌಡ ಅಭಿನಂದನೆ ಸಲ್ಲಿಸಿ ಮಾತನಾಡಿ ನೂತನ ಉಪಾಧ್ಯಕ್ಷರಾದ ಶ್ರೀಮತಿ ಕವಿತಾರವಿ ಅವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಿ ಎಂದು ಸಲಹೆ ನೀಡಿದರು. ಕಳೆದ ಎರಡು ತಿಂಗಳ ಹಿಂದೆ ನೂತನ ಅಧ್ಯಕ್ಷರಾಗಿ ಸುಮಿತ್ರ ಶಂಭುಲಿಂಗಯ್ಯ ಆಯ್ಕೆಗೊಂಡಿದ್ದರು. ಈ ದಿನ ನೂತನ ಉಪಾಧ್ಯಕ್ಷರನ್ನು ಎಲ್ಲರೂ ಒಗ್ಗಟ್ಟನಿಂದ ಆಯ್ಕೆ ಮಾಡಿರುವುದು ತುಂಬಾ ಸಂತೋಷದ ವಿಚಾರ ಎಂದರು. ಇದೇ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಐನೋರಹಳ್ಳಿ ಮಲ್ಲೇಶ್, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷರಾದ ಐ ಡಿ ಉದಯಶಂಕರ್, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣೆಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ ಶಂಭುಲಿಂಗಯ್ಯ, ಮಾಜಿ ಅಧ್ಯಕ್ಷರಾದ ಶ್ರೀಮತಿ ಅಂಬುಜ ಉದಯಶಂಕರ್, ಐ ಡಿ ಕುಮಾರ್, ಮಾಜಿ ಉಪಾಧ್ಯಕ್ಷರಾದ ಈರಾಜು, ಎಲ್ಐಸಿ ಅಶೋಕ್, ನಾಗಮಣಿಶಿವಣ್ಣ,ಭಾಗ್ಯಮ್ಮ, ಈಶ್, ಐಕನಹಳ್ಳಿ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ನಂಜುಂಡ, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 3
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456