ಐಕನಹಳ್ಳಿ ಗ್ರಾಮ ಪಂಚಾಯತಿಯ ನೂತನ  ಉಪಾಧ್ಯಕ್ಷರಾಗಿ ಕವಿತರವಿ ಅವಿರೋಧವಾಗಿ ಆಯ್ಕೆ

Oct 26, 2025 - 18:38
 0  8
ಐಕನಹಳ್ಳಿ ಗ್ರಾಮ ಪಂಚಾಯತಿಯ ನೂತನ  ಉಪಾಧ್ಯಕ್ಷರಾಗಿ ಕವಿತರವಿ ಅವಿರೋಧವಾಗಿ ಆಯ್ಕೆ

ಕೃಷ್ಣರಾಜಪೇಟೆ: ತಾಲ್ಲೂಕಿನ‌ ಕಿಕ್ಕೇರಿ ಹೋಬಳಿಯ  ಐಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಿಂದಿನ ಉಪಾಧ್ಯಕ್ಷರಾಗಿದ್ದ ಈರಾಜುರವರಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.. ಉಪಾಧ್ಯಕ್ಷ ಸ್ಥಾನ ಬಯಸಿ ಕವಿತರವಿರವರನ್ನು ಹೊರತು ಪಡಿಸಿ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಕವಿತರವಿಯವರು ಅವಿರೋದವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯಾದ ಕರ್ತವ್ಯ ನಿರ್ವಹಿಸಿದ ಕೃಷಿ ಇಲಾಖೆಯ ಅಧಿಕಾರಿ ಘೋಷಿಸಿದರು ಸಹ ಚುನಾವಣಾ ಅಧಿಕಾರಿಗಳಾಗಿ ಪಂಚಾಯತಿ ಅಭಿವೃದ್ದಿ ಅಧಿಕಾರಿ ರವಿಕುಮಾರ್ ಹಾಗೂ ಅನಿಲ್ ಬಾಬು ಕರ್ತವ್ಯ ನಿರ್ವಹಿಸಿದರು.


ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಕವಿತರವಿರವರನ್ನು ಪಕ್ಷದ ಎಲ್ಲಾ ಮುಖಂಡರು ಅಭಿನಂದಿಸಿದರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕವಿತರವಿರವರು ಮಾತನಾಡಿ ನನ್ನನ್ನು ಉಪಾಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆಮಾಡಿದ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ನಮ್ಮ ತಾಲ್ಲೋಕಿನ ಜನಪ್ರಿಯ ಶಾಸಕರಾದ ಹೆಚ್ ಟಿ ಮಂಜು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕರಾದ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡಹಾಗೂ ,ತಾ,ಪಂ ಮಾಜಿ ಸದಸ್ಯ ಕೃಷ್ಣೇಗೌಡ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್,ಆನಗೊಳ‌ಸೊಸೈಟಿ ನಿರ್ದೇಶಕ ಉದಯ್ ಹಾಗೂ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮುಖಂಡರಿಗೆ,ಹಿತೈಷಿಗಳಿಗೆ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ.ನನಗೆ ಸಿಕ್ಕಿರುವ ಕಡಿಮೆ ಅಧಿಕಾರದ ಅವಧಿಯಲ್ಲಿ ಪಕ್ಷ ಭೇದ ಮರೆತು ಮುಂದೆ ಆಯ್ಕೆಯಾಗುವ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮೂಲಭೂತ ಸೌಕರ್ಯಗಳ ಬಗ್ಗೆ ಕಾಳಜಿಯನ್ನು ವಹಿಸುತ್ತೇನೆ.ರಸ್ತೆ ಚರಂಡಿ ಅಭಿವೃದ್ಧಿ,ಶುದ್ಧ ಕುಡಿಯುವ ನೀರು ಸರಬರಾಜು,ಬೀದಿ ದೀಪಗಳ ಅಭಿವೃದ್ಧಿ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನತೆಗೆ ಸ್ಪಂದಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಪ್ರವೀಣ್ ಕಾರ್ಯದರ್ಶಿ,ಪ್ರಭುನಂದಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಮಿತ್ರ,ಮಾಜಿ ಉಪಾಧ್ಯಕ್ಷ ಈರಾಜು,ಸದಸ್ಯರಾದ ಅಂಬುಜ, ನಂಜುಂಡೇಗೌಡ,ಸುವರ್ಣ,ಕುಮಾರ್ ಎನ್,ದೇವರಾಜು,ನಾಗಮಣಿ, ಪ್ರಸನ್ನ ,ಪಲ್ಲವಿ,ಭಾಗ್ಯಮ್ಮ, ಮಂಜೇಗೌಡ,ಶಂಕರ,ಸುಧಾ,ಕೆ.ಎಸ್ ಗ್ರಾಮದ ಮುಖಂಡರುಗಳು ಸೇರಿದಂತೆ ಮತ್ತಿತ್ತರರು ಇದ್ದರು..

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456