ಕನ್ನಡ ರಾಜ್ಯೋತ್ಸವದ ಹಾಗೂ ವರ್ಲ್ಡ್ ಕ್ವಾಲಿಟಿ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆಯನ್ನು ಆಯೋಜಿಸಲಾಗಿತ್ತು

Nov 15, 2025 - 12:49
 0  3
ಕನ್ನಡ ರಾಜ್ಯೋತ್ಸವದ ಹಾಗೂ ವರ್ಲ್ಡ್ ಕ್ವಾಲಿಟಿ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆಯನ್ನು ಆಯೋಜಿಸಲಾಗಿತ್ತು

  ಚನ್ನರಾಯಪಟ್ಟಣ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ ಚನ್ನರಾಯಪಟ್ಟಣ ಇವರ ವತಿಯಿಂದ ವಿಶ್ವ ರಾಜ್ ಎನ್ವಿರಾನ್ಮೆಂಟ್ ಸಂಸ್ಥೆಯ ಕಲ್ಕೆರೆ, ಸಿಬ್ಬಂದಿಗಳಿಗೆ ಕನ್ನಡ ರಾಜ್ಯೋತ್ಸವದ ಹಾಗೂ ವರ್ಲ್ಡ್ ಕ್ವಾಲಿಟಿ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆಯನ್ನು ಆಯೋಜಿಸಲಾಗಿತ್ತು,

ಈ ಕಾರ್ಯಕ್ರಮವನ್ನು ಶ್ರೀಮತಿ ನಳಿನಿ ಜಿ.ಎ ಹಾಗೂ ಶ್ರೀ ಭರತ್ ಕುಮಾರ್ ಹೆಚ್.ಜಿ ಮತ್ತು ಶ್ರೀ ಪ್ರವೀಣ್ ಕುಮಾರ್ ಹಾಗೂ ವೇದಿಕೆ ಗಣ್ಯರು ಉದ್ಘಾಟಿಸಿದರು,
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರವೀಣ್ ಕುಮಾರ್ ಮುಖ್ಯಸ್ಥರು ವಿಶ್ವರಾಜ್ ಸಂಸ್ಥೆರವರು ಇಂದು ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಕಣ್ಣಿನ ತಪಾಸಣೆಯನ್ನು ನಡೆಸುತ್ತಿರುವುದು ಸಂತೋಷದ ವಿಷಯ ಕಾರಣ ನಮ್ಮಲ್ಲಿ ಕೆಲಸ ಮಾಡುವ ಹಲವಾರು ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷವನ್ನು ತೋರುತ್ತಿರುವುದು ನಮಗೆ ಕಂಡುಬಂದಿದ್ದು ಈ ನಿಟ್ಟಿನಲ್ಲಿ ನಾವು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದೇವೆ, ಇಂದು ವಿಶ್ವದ ಕ್ವಾಲಿಟಿ ದಿನದ ಅಂಗವಾಗಿ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ತಾವು ಮಾಡುವ ಕೆಲಸದಲ್ಲಿ ಉತ್ತಮ ಗುಣಮಟ್ಟ ಹಾಗೂ ಶ್ರದ್ಧೆ ಮತ್ತು ವೃತ್ತಿಯ ಗೌರವದಿಂದ ಕೆಲಸ ಮಾಡುವುದರ ಬಗ್ಗೆ ಹಾಗೂ ಗ್ರಾಹಕರಿಗೆ ಹೇಗೆ ಉತ್ತಮ ಸೇವೆಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು,

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭರತ್ ಕುಮಾರ್ ಹೆಚ್. ಜಿ ಚೇರ್ಮನ್ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ ಚನ್ನರಾಯಪಟ್ಟಣ ರವರು ಇಂದು ಕನ್ನಡ ರಾಜ್ಯೋತ್ಸವ ನಮ್ಮ ನಾಡು, ನುಡಿ ಹಾಗೂ ಭಾಷೆಗೆ ವಿಶೇಷ ಗೌರವ ಇರುವ ಈ ನಾಡಿನಲ್ಲಿ ನಾವೆಲ್ಲರೂ ಜನಿಸಿರುವುದು ಪುಣ್ಯ ಎಂದು ಭಾವಿಸೋಣ ಹಾಗೂ ಇಂಥ ಸುಂದರ ದಿನದಂದು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡರೆ ನಾವು ಈ ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರಬಹುದು ಈ ನಿಟ್ಟಿನಲ್ಲಿ ಇಂದು ವಿಶ್ವರಾಜ್ ಎನ್ವಿರಾನ್ಮೆಂಟ್ ಸಂಸ್ಥೆಯವರು ಆರೋಗ್ಯ ಶಿಬಿರವನ್ನು ಆಯೋಜಿಸಿ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ ಇಂದು ತಿಳಿಸಿದರು,
ಈ ಕಾರ್ಯಕ್ರಮವನ್ನು ಕುರಿತು ಮಾತನಾಡಿದ ವೆಂಕಟೇಶ್ ಸಿ ಇಂಜಿನಿಯರ್ ವಿಶ್ವರಾಜ್ ಸಂಸ್ಥೆ ರವರು ಇಂದು ನಮ್ಮ ಸಂಸ್ಥೆಯ ವತಿಯಿಂದ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದೇವೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ತಮ್ಮ ಜೀವನದ ಉದ್ದೇಶ ಹಾಗೂ ತಾವು ಮಾಡುವ ಕೆಲಸದಲ್ಲಿ ನಿಷ್ಠೆ ಪ್ರಾಮಾಣಿಕತೆ ಮತ್ತು ಸಮಯ ಪ್ರಜ್ಞೆ ಯೊಂದಿಗೆ ಕೆಲಸ ಮಾಡಬೇಕು ಇದರಿಂದ ಉತ್ತಮ ಗುಣಮಟ್ಟದ ಕೆಲಸವನ್ನು ಅಥವಾ ಸೇವೆಯನ್ನು ಮಾಡಲು ಸಾಧ್ಯವಾಗುತ್ತದೆ ಹಾಗೂ ನಮ್ಮ ತಾಲೂಕಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಅತ್ಯುತ್ತಮ ಸೇವೆಗಳನ್ನು ಮಾಡುತ್ತಿದೆ ನಾವು ನೋಡಿರುವ ಹಾಗೆ ಹಲವಾರು ಆರೋಗ್ಯ ಶಿಬಿರಗಳು, ರಕ್ತದಾನ ಶಿಬಿರಗಳು ಹಾಗೂ ಇತರೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿರುವ ಈ ಸಂಸ್ಥೆಯು ಇಂದು ನಮ್ಮ ಸಿಬ್ಬಂದಿಗಳಿಗೆ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿರುವುದು ಸಂತೋಷದ ವಿಷಯ ಎಂದು ತಿಳಿಸಿದರು,
ಈ ಕಾರ್ಯಕ್ರಮದ ಉಪಸ್ಥಿತಿಯಲ್ಲಿ ಶ್ರೀ ಜಬಿವುಲ್ಲಾ ಬೇಗ್ ಕಾರ್ಯದರ್ಶಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ ಚನ್ನರಾಯಪಟ್ಟಣ, ಶ್ರೀ ಉದಯ್ ಶಂಕರ್ ನಿರ್ದೇಶಕರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ ಚನ್ನರಾಯಪಟ್ಟಣ, ಶ್ರೀ ಭವಿಕ್ ಆಡಳಿತ ಸಿಬ್ಬಂದಿಗಳು ವಿಶ್ವರಾಜ್ ಸಂಸ್ಥೆ, ಮುರಳಿ ಸಿಬ್ಬಂದಿ ವಿಶ್ವರಾಜ್ ಸಂಸ್ಥೆ ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456