ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ

Jan 17, 2026 - 15:34
 0  2
ಕನ್ನಡಿಗರ ಮೇಲೆ ಹಲ್ಲೆ ಗಡಿ ಬಂದ್ ಮಾಡಲು ಚಿಂತನೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ

   ಶಬರಿಮಲೆಗೆ ತೆರಳುತ್ತಿದ್ದ ಕನ್ನಡಿಗರ ವಾಹನದಲ್ಲಿದ್ದ ಕನ್ನಡ ಬಾವುಟವನ್ನು ತೆಗೆಯುವಂತೆ ತಮಿಳುನಾಡಿನಲ್ಲಿರುವ ಕೆಲವು ಗುಂಡಗಳ ಗುಂಪು ಆಗ್ರಹಿಸಿ ಕನ್ನಡಿಗ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.


ತಮಿಳಿಗರು ಮತ್ತು ಕನ್ನಡಿಗರು ಕರ್ನಾಟಕದಲ್ಲಿ ಸೋದರ ಭಾವದಿಂದ ಬಾಳುತ್ತಿರುವಾಗ, ತಮಿಳುನಾಡಿನಲ್ಲಿನ ಕೆಲವು ಗುಂಡಗಳು  ಕನ್ನಡಿಗ ಪ್ರಯಾಣಿಕರನ್ನು ಗುರಿಯಾಗಿಸಿ ಹಲ್ಲೆ ನಡೆಸುವುದು, ಕನ್ನಡಿಗರ ಅಸ್ಮಿತೆಯಾದ ಕೆಂಪು ಹಳದಿ ಬಾವುಟವನ್ನು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕರ್ನಾಟಕ ತಮಿಳುನಾಡು ಗಡಿ ಬಂದ್ ಮಾಡಲು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.

ತಮಿಳುನಾಡಿನ ಚುನಾವಣೆ ಸನಿಹದಲ್ಲಿರುವಾಗ ಇಂತಹ ಪ್ರಾದೇಶಿಕ ದ್ವೇಷವನ್ನೂ ಅಸ್ತ್ರವಾಗಿಸಿಕೊಳ್ಳುವ ಹುನ್ನಾರ ಇದರಲ್ಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಕ್ಷಣವೇ ತಮಿಳುನಾಡು ಮುಖ್ಯಮಂತ್ರಿಗಳಿಗೆ ಘಟನೆಯ ಕುರಿತು ಕ್ರಮ ಕೈಗೊಳ್ಳುವಂತೆ, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಆಗ್ರಹಿಸಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456