ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಅದ್ದೂರಿ

ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಪ್ರಯುಕ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ರವರು ಧ್ವಜಾರೋಹಣ ನೆರವೇರಿಸಿದರು. ಮಕ್ಕಳಿಂದ ಭರತನಾಟ್ಯ, ಭಾಷಣ, ವೇಷಭೂಷಣ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಸುಧೀಂದ್ರ ಮತ್ತು ನಾರಾಯಣಸ್ವಾಮಿ ರವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಶಿಕ್ಷಕ ಸುಧೀಂದ್ರ ರವರು ಮಾತನಾಡಿ ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಆಗಿರುವುದರಿಂದ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ, ಐಕ್ಯತೆಯ ಶಿಕ್ಷಣ ಹಾಗೂ ನೈತಿಕತೆಯ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲೆ ಎಷ್ಟಿದೆಯೋ, ಪಾಲಕರೂ ಸಹ ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶಿಕ್ಷಣ ಕೊಡಿಸುವುದು ಅಷ್ಟೇ ಮುಖ್ಯವಾಗಿದೆ. ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಶಿಕ್ಷಣವೇ ಅಸ್ತ್ರ ಪ್ರತಿಯೊಬ್ಬರೂ ವಿದ್ಯಾವಂತರಾದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ ಜನವರಿ 26ರಂದು ಸಂವಿಧಾನವನ್ನು ಅಂಗೀಕರಿಸುವ ಮೂಲಕ ಗಣರಾಜ್ಯ ಎಂದು ಘೋಷಿಸಲ್ಪಟ್ಟ ದಿನವಾಗಿದೆ ಎಂದು ತಿಳಿಸಿದರು. ಗಣರಾಜ್ಯೋತ್ಸವವು ವಿವಿಧತೆಯಲ್ಲಿ ಏಕತೆಯನ್ನು ಸಂಕೇತಿಸುತ್ತದೆ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳನ್ನು ಒತ್ತಿಹೇಳುತ್ತದೆ ಎಂದರು. ಶಿಕ್ಷಕರಾದ ಸೊಣ್ಣೇಗೌಡ ರವರು ಮಾತನಾಡಿ 1947ರ ಆಗಸ್ಟ್‌ 15 ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆನಂತರ 1950ರ ಜನವರಿ 26 ರಂದು ಭಾರತ ಸಂವಿಧಾನವನ್ನು ಜಾರಿಗೆ ತರಲಾಯಿತು. ಅಂದಿನಿಂದ ಪ್ರತಿವರ್ಷ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಿಕೊಂಡು ಬರಲಾಗಿದೆ. ಭಾರತದಲ್ಲಿ ಗಣರಾಜ್ಯೋತ್ಸವವು ಭಾರತವನ್ನು ಸಾರ್ವಭೌಮ ಗಣರಾಜ್ಯವಾಗಿ ಮತ್ತು ಬ್ರಿಟಿಷರ ಆಳ್ವಿಕೆಯಿಂದ ಪ್ರತ್ಯೇಕಿಸಿ ಭಾರತವನ್ನು ಸ್ಥಾಪಿಸುವ ಗಣರಾಜ್ಯದ ಸಂವಿಧಾನದ ಶಾಸನವನ್ನು ಸೂಚಿಸುತ್ತದೆ ಎಂದು ತಿಳಿಸಿದರು. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಸೊಣ್ಣೇಗೌಡ ರವರು ಮಾತನಾಡಿ 1947ರ ಆಗಸ್ಟ್‌ 15 ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆನಂತರ 1950ರ ಜನವರಿ 26 ರಂದು ಭಾರತ ಸಂವಿಧಾನವನ್ನು ಜಾರಿಗೆ ತರಲಾಯಿತು. ಅಂದಿನಿಂದ ಪ್ರತಿವರ್ಷ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಿಕೊಂಡು ಬರಲಾಗಿದೆ. ಭಾರತದಲ್ಲಿ ಗಣರಾಜ್ಯೋತ್ಸವವು ಭಾರತವನ್ನು ಸಾರ್ವಭೌಮ ಗಣರಾಜ್ಯವಾಗಿ ಮತ್ತು ಬ್ರಿಟಿಷರ ಆಳ್ವಿಕೆಯಿಂದ ಪ್ರತ್ಯೇಕಿಸಿ ಭಾರತವನ್ನು ಸ್ಥಾಪಿಸುವ ಗಣರಾಜ್ಯದ ಸಂವಿಧಾನದ ಶಾಸನವನ್ನು ಸೂಚಿಸುತ್ತದೆ ಎಂದು ತಿಳಿಸಿದರು. ಈ ಅದ್ದೂರಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕ ಸೊಣ್ಣೇ ಗೌಡ, ನಿವೃತ್ತ ಶಿಕ್ಷಕರಾದ ಸುಧೀಂದ್ರ, ನಾರಾಯಣಸ್ವಾಮಿ, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನಾರಾಯಣಸ್ವಾಮಿ,ಉಪ ಪ್ರಾಂಶುಪಾಲ ಗೋಪಿನಾಥ್, ಗ್ರಾಮ ಪಂಚಾಯಿತಿ ಸದಸ್ಯ ಕೆ ಇ ಬಿ ಚಂದ್ರು, ರಾಜೇಂದ್ರ, ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೆಂಕಟರಮಣಪ್ಪ, ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ವಿಭಾಗದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರು, ಮಕ್ಕಳು, ಗ್ರಾಮ ಪಂಚಾಯಿತಿ ಸದಸ್ಯರು, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.