ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಪ್ರತಿಭಟನೆ
ಕೋಲಾರ: ರಾಜ್ಯಪಾಲರನ್ನು ವಾಪಸ್ಸು ಕರೆಸಿಕೊಳ್ಳುವ ಬಗ್ಗೆ
ಕರ್ನಾಟಕ ರಕ್ಷಣಾ ವೇದಿಕೆ ಕೋಲಾರ ಜಿಲ್ಲಾ ಘಟಕವು ಇಂದು ಜಿಲ್ಲಾಧಿಕಾರಿ ಎಂ .ಆರ್
ರವಿ. ಮೂಲಕ ಮನವಿ ಸಲ್ಲಿಸಲಾಯಿತು.
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಒತ್ತಾಯಿಸಿದರು
ರಾಜ್ಯ ಸರ್ಕಾರವು ಎಸ್.ಎಸ್.ಎಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ. ಎಂದರು.
“ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ” ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ‘ಸುರಕ್ಷಿತ ಸ್ವರ್ಗʼವನ್ನಾಗಿಸುವ ದೂರಗಾಮಿ ಉದ್ದೇಶಗಳು
ಹಿಂದಿ ಮಾಫಿಯಾಗೆಇದೆ. ಅದರಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ. ಎಂಬುದು ಸ್ಪಷ್ಟ.
ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ.
ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ. ಆಕ್ರೋಶದಿಂದ ಹೇಳಿದರು. ಈ ಸಂದರ್ಭದಲ್ಲಿ ಕರವೇ ತಾಲೂಕ ಅಧ್ಯಕ್ಷರುಗಳಾದ. ನಂಜುಂಡಪ್ಪ. ರಾಮ್ ಪ್ರಸಾದ್. ಸುಹೇಲ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು. ಮುನಿರಾಜ್ ಕನ್ನಡ ಹೋರಾಟಗಾರರು ಹೆಚ್. ರಾಮಚಂದ್ರಪ್ಪ. ನವೀನ್ ಮಾಲೂರು. ಗೂಡ್ಸೆ. ಮಂಜುನಾಥ್. ಫ್ರೂಟ್ಸ್ ಮಂಜು ಕೆಜಿಎಫ್. ಮಹಿಳಾ ಅಧ್ಯಕ್ಷರುಗಳು ಭಾಗವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
