ಕಸಾಪ ಅಧ್ಯಕ್ಷರ ಸಚಿವ ಸ್ಥಾನಮಾನ ವಾಪಸು ಮರುಪರಿಶೀಲನೆಗೆ ತೇಜಸ್ವಿ ಮನವಿ

Jun 1, 2025 - 15:56
 0  13
ಕಸಾಪ ಅಧ್ಯಕ್ಷರ ಸಚಿವ ಸ್ಥಾನಮಾನ ವಾಪಸು ಮರುಪರಿಶೀಲನೆಗೆ ತೇಜಸ್ವಿ ಮನವಿ

June 1, 2025

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನ ವಾಪಸ್ ಪಡೆದಿರುವ ಸರ್ಕಾರದ ನಿರ್ಧಾರಕ್ಕೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರು.

ಮಹೇಶ್ ಜೋಶಿ ಅವರೇನೂ ತಮಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಕೇಳಿರಲಿಲ್ಲ ತಾನಾಗಿಯೇ ಕೊಟ್ಟಿತ್ತು ಎಂದು ತೇಜಸ್ವಿ ತಿಳಿಸಿದ್ದಾರೆ.

ಇದೆ ಮೊದಲ ಬಾರಿಗೆ ಕಸಾಪ ಅಧ್ಯಕ್ಷರಾದ ವರಿಗೆ ಆಗಿನ ಬಿಜೆಪಿ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ರಾಗಿದ್ದ ಸುನೀಲ್ ಕುಮಾರ್ ಅವರು ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ ಗೆ ಗೌರವ ನೀಡುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದವರಿಗೆ ರಾಜ್ಯ ಸಚಿವ ಸ್ಥಾನಮಾನದ ಪದವಿಯನ್ನು ನೀಡುವಂತೆ ಕೋರಿದ್ದರು.ಅದಕ್ಕೆ ಸ್ಪಂದಿಸಿ ಅದೇ ರೀತಿ ಸ್ಥಾನಮಾನ ನೀಡಲಾಗಿತ್ತು.

ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಕಸಾಪ ಅಧ್ಯಕ್ಷರ ರಾಜ್ಯ ಸಚಿವ ಸ್ಥಾನವನ್ನು ಹಿಂಪಡೆದಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ ಗೆ ಮತ್ತು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.

ಯಾವುದೇ ಒಂದು ಉನ್ನತ ಪದವಿಯನ್ನು ಅಲಂಕರಿಸಿದ ವ್ಯಕ್ತಿಗಳ ಮೇಲೆ ಆರೋಪಗಳು ಬರುವುದು ಸಹಜ ಆದರೆ ಅದರ ಸತ್ಯಾಸತ್ಯತೆ ಅರಿಯದೆ ರಾಜ್ಯ ಸರ್ಕಾರ ಈ ರೀತಿಯ ಆತುರದ ನಿರ್ಧರ ಕೈಗೊಂಡಿರುವುದು ಸರಿಯಲ್ಲ ಎಂದು ತೇಜಸ್ವಿ ತಿಳಿಸಿದ್ದಾರೆ.

ಕಸಾಪ ಚುನಾವಣೆಯಲ್ಲಿ ದಾಖಲೆ ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಜೋಶಿ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನ ವನ್ನು ಮತ್ತೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456