ಕಾರ್ಯಕರ್ತರು ಜೆಡಿಎಸ್ ಪಕ್ಷದ ಗಟ್ಟಿ ಧ್ವನಿಯಾಗಬೇಕು : ಬಿ ಪುಟ್ಟಸ್ವಾಮಿ
ಸಂತೆಮರಹಳ್ಳಿ : ಜನರೊಂದಿಗೆ ಜನತಾ ಕಾರ್ಯಕ್ರಮವನ್ನು ಕೊಳ್ಳೇಗಾಲ ಕ್ಷೇತ್ರದ ಜೆಡಿಎಸ್ ಪಕ್ಷದ ಪೂರ್ವಭಾವಿ ಸಭೆಯನ್ನು ಸಂತೆಮರಹಳ್ಳಿ ಮಾದೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಯಿತು.
ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಪಕ್ಷದ ಮುಖಂಡ ಬಿ ಪುಟ್ಟಸ್ವಾಮಿ ಮಾತನಾಡಿ ಕೊಳ್ಳೇಗಾಲ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮುಕಾಂತರ ಜೆಡಿಎಸ್ ಪಕ್ಷದ ಸಂಘಟನೆಗೆ ಬೆಂಬಲ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕರ್ತರು ಜೆಡಿಎಸ್ ಪಕ್ಷದ ದ್ವನಿಯಾಗುವುದರ ಮುಖ್ಯನಾ ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಖಾತೆ ತೆರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಆಗಾಗಿ ಕೊಳ್ಳೇಗಾಲ ಕ್ಷೇತ್ರದ ಯಳಂದೂರು, ಸಂತೆಮರಹಳ್ಳಿ ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಪಕ್ಷದ ಸಂಘಟನೆಗೆ ಮುಂದಾಗಬೇಕು ಕರೆ ನೀಡಿದರು.
ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಲ್ಲಿ ಗೆಲುವು ನಮ್ಮದೇ ಎಂದರು.
ಏಪ್ರಿಲ್ 15 ರಿಂದ 25 ರ ಒಳಗೆ ಟಿಕೆಟ್ ನಿಗದಿಯಾಗುವ ಭರವಸೆ ನೀಡಿದರು.
ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿ ಅಭಿವೃದ್ಧಿ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿರುವ ಅವಧಿಯಲ್ಲಿ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯ ಮಂತ್ರಿ ಎಂದರು.
ಪಕ್ಷದ ಕಾರ್ಯಕರ್ತರು ಯಾವುದೇ ಸಂದರ್ಭದಲ್ಲಿ ದೃತಿಗೆಡದೆ ಪಕ್ಷದ ಸಂಘಟನೆಗೆ ಹೆಚ್ಚು ಒಟ್ಟು ನೀಡುವುದರ ಜೊತೆಗೆ ಶಕ್ತಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೊಳ್ಳೇಗಾಲ ನಗರಸಭೆ ಸದಸ್ಯೆ ಜಯಮೇರಿ, ಮುಖಂಡರಾದ ಎಂ ಪಿ ಶಂಕರಪ್ಪ, ರವಿಕುಮಾರ್, ಕೃಷ್ಣ, ಬೆಳ್ಳಿಯಪ್ಪ, ಮಂಗಳಮ್ಮ, ಸೈಯದ್ ಅಕ್ರಮ್, ಆನಂದ್, ಶಿವಮಲ್ಲೇಗೌಡ, ಕಾಂತರಾಜ್, ರವೀಶ್, ವಡ್ಡಗೆರೆ ಮಹದೇವ ಹಾಗೂ ಕೊಳ್ಳೇಗಾಲ ಕ್ಷೇತ್ರದ ವಿವಿಧ ಭಾಗಗಳಿಂದ ಕಾರ್ಯಕರ್ತರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
