ಕೆಜಿಎಫ್: 11 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ರೂಪಕಲಾ ಶಶಿಧರ್ ಚಾಲನೆ

Mar 16, 2026 - 16:45
 0  4
ಕೆಜಿಎಫ್: 11 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ರೂಪಕಲಾ ಶಶಿಧರ್ ಚಾಲನೆ

    ಕೆಜಿಎಫ್: ನಗರದ ಹೊರವಲಯದ ಸ್ಕೂಲ್ ಆಫ್ ಮೈನ್ಸ್‌ನಿಂದ ಕೃಷ್ಣವರಂವರೆಗಿನ ರಸ್ತೆ ಅಭಿವೃದ್ಧಿ, ನೂತನ ಸೇತುವೆ ನಿರ್ಮಾಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೆ ಶಾಸಕಿ ರೂಪಕಲಾ ಶಶಿಧರ್ ಅವರು ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 11 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
 
ಈ ಸಂದರ್ಭದಲ್ಲಿ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಸಾರ್ವಜನಿಕರ ದಶಕಗಳ ಬೇಡಿಕೆಗೆ ಕೊನೆಗೂ ಚಾಲನೆ ಸಿಕ್ಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಈ ರಸ್ತೆಯಲ್ಲಿ ಪ್ರಮುಖ ಕಾಲೇಜು ಹಾಗೂ ಎರಡು ಸ್ಮಶಾನಗಳಿರುವುದರಿಂದ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟ ಅತಿಯಾಗಿದೆ. ರಸ್ತೆ ಸರಿಯಿಲ್ಲದ ಕಾರಣ ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಈ ಎಲ್ಲಾ ಸಮಸ್ಯೆಗಳನ್ನು ಮನಗಂಡು, ಸುಸಜ್ಜಿತ ರಸ್ತೆ ಹಾಗೂ ಸಂಚಾರ ಸುರಕ್ಷತೆಗಾಗಿ ರಸ್ತೆಯ ಉದ್ದಕ್ಕೂ ವಿದ್ಯುತ್ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಸಕರು ತಿಳಿಸಿದರು.

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿರುವ ಶಾಸಕರು, ಮುಂದಿನ ಮೂರು ತಿಂಗಳ ಒಳಗಾಗಿ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ  ಹಿರಿಯ ಅಧಿಕಾರಿಗಳು, ಕಾಮಗಾರಿ ಗುತ್ತಿಗೆದಾರರು, ಸ್ಥಳೀಯ ಮುಖಂಡರು ಹಾಗೂ ಕೃಷ್ಣವರಂ ಭಾಗದ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456