ಕೆಜಿಎಫ್ ನಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮ: ಆಮಂತ್ರಣ
ಕೆಜಿಎಫ್: ಕೆಜಿಎಫ್ ನಗರದ ವೋಟ್ ಲೈನ್ ನಲ್ಲಿ ನೆಲೆಸಿರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವ ಲೋಕ ರಕ್ಷಕನಾದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಮಹೋತ್ಸವು ಈ ಬಾರಿ ಅತ್ಯಂತ ವೈಭವದಿಂದ ಜರುಗಲಿದೆ. ಎಂದು ದೇವಾಲಯದ ಮಂಡಳಿಯವರು ತಿಳಿಸಿದರು
ದಿನಾಂಕ 29 ರಿಂದ 30 ರವರೆಗೆ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರು ಆಹ್ವಾನಿಸಿದರು. ಸಾಂಸ್ಕೃತಿಕ ಕಾರ್ಯ ಕ್ರಮಗಳು: ಭಕ್ತಿ ಭಾವದ ಜೊತೆಗೆ ಮನರಂಜನೆಗಾಗಿ ಗ್ರಾಮದ ವತಿಯಿಂದ ನಾಟಕ, ಭಜನೆ ಹಾಗೂ ಜಾನಪದ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯುತ್ ದೀಪಾಲಂಕಾರ ಸ್ವಾಮಿಯವರ ಪುಷ್ಪಪಲ್ಲಕ್ಕಿ ಬೆಳ್ಳಿ ರಥ ಹಾಗೂ ರಸಮಂಜರಿ(ಆರ್ಕೆಸ್ಟ್ರಾ) ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಪ್ರಸಾದ ವಿನಿಯೋಗ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಗಮಿಸಲಿದ್ದು ಎಲ್ಲಾ ಭಕ್ತಾದಿಗಳಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ವಾರ್ಡಿನ ನಿವಾಸಿಗಳು ಹಾಗೂ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
