ಕೆಜಿಎಫ್ ವಿಶ್ವೇಶ್ವರಯ್ಯ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ

Feb 20, 2026 - 10:56
 0  7
ಕೆಜಿಎಫ್ ವಿಶ್ವೇಶ್ವರಯ್ಯ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ

       ಕೆಜಿಎಫ್: ಕೋಲಾರ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಇತಿಹಾಸವನ್ನು ಹೊಂದಿದೆ ಅದರಲ್ಲಿ ಪ್ರಮುಖವಾಗಿ ಕೆಜಿಎಫ್ ತಾಲೂಕಿನ ಶಿಕ್ಷಕರ ಕೊಡುಗೆ ಅಪಾರ ಎಂದು ನಗರದ ವಿಶ್ವೇಶ್ವರಯ್ಯ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಖಾಸಗಿ ಶಾಲೆಗಳ ಅಧ್ಯಕ್ಷರು. ಮುನಿಯಪ್ಪ 

ಕೋಲಾರ ಜಿಲ್ಲೆಯಲ್ಲಿ ಬೆಂಗಳೂರಿನಲ್ಲಿ ಈ ರೀತಿಯಾಗಿ ಎಲ್ಲೇ ಹೋದರು ನಮ್ಮ ಕೆಜಿಎಫ್ ನ ಶಿಕ್ಷಕರು ಇರುತ್ತಾರೆ. ಇಂಥ ನಮ್ಮ ನಗರದಲ್ಲಿ ವಿಶ್ವೇಶ್ವರಯ್ಯ ಶಾಲೆ ಒಳ್ಳೆಯ ಶಿಕ್ಷಣವನ್ನು ನೀಡುತ್ತಿದೆ ತಮ್ಮ ಮಕ್ಕಳನ್ನು ಇಂತಹ ಶಾಲೆಗಳಿಗೆ ಸೇರಿಸಿ ಒಳ್ಳೆಯ ವಿದ್ಯಾವಂತರನ್ನಾಗಿ ಮಾಡಿಸಿ ಬೆಂಗಳೂರಿಗೆ ಹೋಲಿಸಿದರೆ ಇಲ್ಲಿನ ಶಾಲೆಗಳಲ್ಲಿ 10 ಇಲ್ಲ 15 ಸಾವಿರ ಇದ್ದರೆ ಪೋಷಕರಿಗೆ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬಹುದು ಎಂದರು.

ಜಿಲ್ಲಾ ಖಾಸಗಿ ಶಾಲೆಗಳ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ. ಅ. ಮು. ಲಕ್ಷ್ಮೀನಾರಾಯಣ್ ಮಾತನಾಡಿ ಕೆಜಿಎಫ್ ಎನ್ನುವುದು ಚಿನ್ನದ ನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿದವರು ದೇಶ ವಿದೇಶಗಳಲ್ಲಿ ಸಾಕಷ್ಟು ಮಂದಿ ಇದ್ದಾರೆ. ಈ ನೆಲದ ಶಕ್ತಿ ಅದು ಈಗಿನ ಪೋಷಕರು ಮಕ್ಕಳನ್ನು ಇಂತಹ ಸ್ಥಳಗಳಲ್ಲಿ ಸೇರಿಸಿ ಒಳ್ಳೆಯ ಶಿಕ್ಷಣವನ್ನು ನೀಡಿ. ಅದೇ ರೀತಿಯಾಗಿ ಮಕ್ಕಳ ಕೈಗೆ ಮೊಬೈಲನ್ನು ನೀಡಬೇಡಿ ಆದಷ್ಟು ಮಕ್ಕಳ ಚಲನ ವಲನಗಳ ಮೇಲೆ ಮೇಲೆ ನಿಗಾ ಇಡಿ ಕಷ್ಟ ಸುಖಗಳಲ್ಲಿ ಮಕ್ಕಳೊಂದಿಗೆ ಹಂಚಿಕೊಳ್ಳಿ ಎಂದು ಪೋಷಕರಿಗೆ ತಿಳಿಸಿದರು. 

ಸ್ಥಳೀಯ ನಗರಸಭೆ ಮಾಜಿ ಸದಸ್ಯರಾದ ಕೋದಂಡನ್ ಮಾತನಾಡಿ ವಿಶ್ವೇಶ್ವರಯ್ಯ ಶಾಲೆಯ ತನ್ನದೇ ಆದ ಹೆಸರು ಪಡೆದುಕೊಂಡಿದೆ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ನೀಡುತ್ತಿದೆ ನನ್ನ ಮಗಳು ಸಹ ಇಲ್ಲೇ ಓದಿ ಈಗ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.
ಶಾಲೆಯ ಮಕ್ಕಳು ವಿವಿಧ ವೇಷ ಭೂಷಣಗಳಿಂದ ಕಂಗೊಳಿಸುತ್ತಿದ್ದು, ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಿದರು. 

ಈ ಸಂದರ್ಭದಲ್ಲಿ ಶ್ರೀಮತಿ ಲತಾ. ಸಿಆರ್ಪಿ ಸುಬ್ರಮಣಿ. ಶಾಲೆಯ ಸಿಬ್ಬಂದಿ ವರ್ಗ ಹಾಜರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456