ಕೆಜಿಎಫ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ
ಕೆ.ಜಿ.ಎಫ್: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನ ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ ನಾರಾಯಣ್ ಮೂರ್ತಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಬೇಕು ಕೇವಲ ಪಠ್ಯಕ್ಕೆ ಸೀಮಿತವಾಗದೆ ಅನ್ವೇಷಣಾ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಂದಿನ ಯುವ ಪೀಳಿಗೆಯು ಮೂಢನಂಬಿಕೆಗಳಿಂದ ಹೊರಬಂದು, ಪ್ರತಿಯೊಂದನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಬೇಕು ಎಂದರು.
ವಿಜ್ಞಾನ ವಸ್ತುಪ್ರದರ್ಶನ
ವಿದ್ಯಾರ್ಥಿಗಳು ಸ್ವತಃ ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳು ಪರಿಸರ ಸ್ನೇಹಿ ತಂತ್ರಜ್ಞಾನ ಹಾಗೂ ಸುಸ್ಥಿರ ಇಂಧನದ ಕುರಿತಾದ ಪ್ರಾತ್ಯಕ್ಷಿಕೆಗಳು ಎಲ್ಲರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ. ನಾರಾಯಣ್ ಮೂರ್ತಿ, ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
What's Your Reaction?
Like
2
Dislike
0
Love
1
Funny
0
Angry
0
Sad
0
Wow
2
