ಕೆಜಿಎಫ್‌ನಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಕೆಜಿಎಫ್‌ನಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

   ಕೆಜಿಎಫ್: ನಗರದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
ಬೆಳಗ್ಗೆ 6 ಗಂಟೆಯಿಂದಲೇ ದೇವರ ದರ್ಶನ ಪಡೆಯಲು ಭಕ್ತರು ದೇವಾಲಯದ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತು, ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮೂಲ ವಿಗ್ರಹಕ್ಕೆ ವಿವಿಧ ದ್ರವ್ಯಗಳಿಂದ ವಿಶೇಷ ಅಭಿಷೇಕ ನೆರವೇರಿಸಿ, ವಿವಿಧ ಬಗೆಯ ಪುಷ್ಪಗಳಿಂದ ದೇವರನ್ನು ಅಲಂಕರಿಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಹಳೆ ಸ್ವರ್ಣ ಕುಪ್ಪಂ ಮುನಿಸ್ವಾಮಿ ಅವರ ಕುಟುಂಬದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ರಂಜಿತ್ ದೀಕ್ಷಿತ್ ಅವರು ವಿಶೇಷ ಪೂಜಾ ಕೈಂಕರ್ಯಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು. ಶ್ರಾವಣ ಮಾಸದ ವಿಶೇಷ ಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.