ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯ ವಿರುದ್ಧ ಸಿಪಿಎಂ ಮುಖಂಡರ ಆಕ್ರೋಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯ ವಿರುದ್ಧ ಸಿಪಿಎಂ ಮುಖಂಡರ ಆಕ್ರೋಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯ ವಿರುದ್ಧ ಸಿಪಿಎಂ ಮುಖಂಡರ ಆಕ್ರೋಶ

ಬಾಗೇಪಲ್ಲಿ: ಪಟ್ಟಣದಲ್ಲಿ ಸಿಪಿಎಂ, ಕರ್ನಾಟಕ ಮಸಣ ಕಾರ್ಮಿಕರ ಸಂಘಟನೆ ಸಿಐಟಿಯು ಸೇರಿದಂತೆ ಹಲವು ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಿ.ಪಿ.ಐ.ಎಂ ಮುಖಂಡ ಡಾ: ಅನೀಲ್ ಕುಮಾರ್ ಅವುಳಪ್ಪ ಕೇಂದ್ರ ಸರ್ಕಾರವು ಬಂಡವಾಳ ಶಾಹಿಗಳ ಕಾರ್ಪೊರೇಟ್ ಕೊಳಗಳ ಬಗೆಗಿನ ಕಾಳಜಿ ದೇಶದ ಬಡವರ ಕೂಲಿಕಾರ್ಮಿಕರ ಕೃಷಿ ಕೂಲಿ ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲವಾಗಿದೆ. ಹಾಗಾಗಿ ದೇಶದಲ್ಲಿ ಬಡವರು ಬಡವರಾಗಿಯೇ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ದುಡಿಯುವ ವರ್ಗಕ್ಕೆ ಅನ್ಯಾಯವಾಗುತ್ತಿದ್ದು, ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯ ಸರ್ಕಾರವು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳಂತೆ ಅಕ್ಕಿಯನ್ನು ನೀಡದೆ ಹಣ ನೀಡುತ್ತಿರುವುದು ಸರಿಯಲ್ಲ. ತಾಲೂಕಿನಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವಾಡುತ್ತಿದೆ. ಅಧಿಕಾರಿಗಳು ಕೆಲವರ ಕೈಗೊಂಬೆಗಳಂತೆ ಆಡುತ್ತಿದ್ದಾರೆ.‌ಜನಸಾಮಾನ್ಯರ ಕೆಲಸಗಳು ಯಾವುದೇ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿಲ್ಲ. ಹಾಗಾಗಿ ಇಂತಹ ತಾಲೂಕು ಆಡಳಿತ ವೈಖರಿ ಬದಲಾಯಿಸಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಸಿಪಿಐಎಂ ಕಾರ್ಯಕರ್ತರು ಇದ್ದರು.