ಕೇಂದ್ರ ಸಚಿವರೊಂದಿಗೆ ಬೆಮೆಲ್ ಅಧ್ಯಕ್ಷರ ಭೇಟಿ

Aug 29, 2025 - 14:06
 0  48
ಕೇಂದ್ರ ಸಚಿವರೊಂದಿಗೆ  ಬೆಮೆಲ್ ಅಧ್ಯಕ್ಷರ ಭೇಟಿ

ನವದೆಹಲಿ: ಬೆಮೆಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಂತನು ರಾಯ್, ಬಂದರು, ನೌಕಾಯಾನ ಮತ್ತು ಜಲಮಾರ್ಗಗಳ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾಗಿ, ಭಾರತದ ಸಮುದ್ರ ಮತ್ತು ಬಂದರು ಮೂಲಸೌಕರ್ಯದ ವಿಸ್ತರಣೆ ಕುರಿತು ಚರ್ಚೆ ನಡೆಸಿದರು.

        ಸಭೆಯಲ್ಲಿ ಬೆಮೆಲ್, ಸಮುದ್ರ ವಲಯ ಮತ್ತು ಅಂತರ್ದೇಶೀಯ ಜಲಮಾರ್ಗಗಳ ಅಭಿವೃದ್ಧಿಯಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನ ಕೊಡುಗೆ, ಮುಂದಿನ ಪೀಳಿಗೆಯ ಡ್ರೆಡ್ಜರ್ ತಂತ್ರಜ್ಞಾನಗಳು ಮತ್ತು ಸುಧಾರಿತ ಎಂಜಿನ್ ತಂತ್ರಜ್ಞಾನಗಳ ಕುರಿತಾಗಿ ವಿಶೇಷವಾಗಿ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ದೇಶೀಯ ಇಂಜಿನಿಯರಿಂಗ್ ಸಾಮರ್ಥ್ಯಗಳನ್ನು ಬಳಸಿಕೊಂಡು ಬಲಿಷ್ಠ ಹಾಗೂ ಭವಿಷ್ಯೋನ್ಮುಖ ಮೂಲಸೌಕರ್ಯ ನಿರ್ಮಿಸುವ ಅಗತ್ಯತೆ ಕುರಿತು ಮನವರಿಕೆ ಮಾಡಿ ಕೂಡಲಾಯಿತು. ಆತ್ಮನಿರ್ಭರ ಭಾರತ ದೃಷ್ಟಿಕೋನದೊಂದಿಗೆ ಬೆಮೆಲ್ ತಂತ್ರಜ್ಞಾನ ಸಾಮರ್ಥ್ಯಗಳು ರಾಷ್ಟ್ರದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456