ಕೇಂದ್ರ ಸರ್ಕಾರದ ವಿರುದ್ಧ ಕೆಂಬಾವುಟ ಅಡಿಯಲ್ಲಿ ಹೋರಾಟಕ್ಕೆ ಸಜ್ಜು
ಭಾಗ್ಯನಗರ: ಗ್ರಾಮೀಣ ಬಡವರ ಮತ್ತು ಕೂಲಿ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿಯುವ ಹುನ್ನಾರ ನಡೆಸಿ ಮಹತ್ಮ ಗಾಂಧಿ ನರೇಗಾ ಕಾಯ್ದೆಯನ್ನು ವಿಬಿ-ಜಿ ರಾಮ್ (ಜಿ) ಯೋಜನೆಯನ್ನಾಗಿ ಪರಿವರ್ತನೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೇ 15 ತಾಲೂಕಿನ ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ಏಕಕಾಲದಲ್ಲಿ ಹೊರ ಮಾಡುತ್ತೇವೆ ಎಂದು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ಕಾರ್ಯದರ್ಶಿ ಸೋಮು ತಿಳಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಭವನದಲ್ಲಿ AIAWU, KPRS, CITU ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಪತ್ರಿಕಾಘೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಗಿಂತ ಮೊದಲು ವಿವಿಧ ರಾಜ್ಯಗಳಲ್ಲಿ ಹಲವು ರೀತಿಯಲ್ಲಿ ಉದ್ಯೋಗದ ಯೋಜನೆಗಳು ಜಾರಿಯಾಗುತ್ತಿದ್ದವು.
ಆದರೆ ಆ ಯೋಜನೆಗಳು ನಿರ್ದಿಷ್ಟ ವ್ಯಾಪ್ತಿಯಲ್ಲಿ ಇರುತ್ತಿದ್ದವು ಆದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ 2005ರಲ್ಲಿ ಜಾರಿಯಾದಾಗ ಅದು ದೇಶಾದ್ಯಂತ ಒಂದೇ ರೀತಿಯಲ್ಲಿ ಜಾರಿಯಾಗುವಂತೆ ಉದ್ಯೋಗದ ಅವಶ್ಯಕತೆ ಇರುವವರೆಲ್ಲರಿಗೂ ಉಪಯೋಗವಾಗುವ ರೀತಿಯಲ್ಲಿ ಈ ಕಾಯ್ದೆಯನ್ನು ರೂಪಿಸಲಾಗಿತ್ತು ಆದರೆ ಈಗ ಮಹತ್ಮ ಗಾಂಧಿ ನರೇಗಾ ಕಾಯ್ದೆಯನ್ನು ವಿಬಿ- ಜಿ ರಾಮ್ (ಜಿ) ಯೋಜನೆಯನ್ನಾಗಿ ಪರಿವರ್ತನೆ ಮಾಡುತ್ತಿರುವ ಕೇಂದ್ರ ಬಿಜೆಪಿ ಮೋದಿ ಸರ್ಕಾರ ಬಡವರನ್ನು ಮತ್ತಷ್ಟು ಶೋಷಿತರಾನ್ನಾಗಿ ಮಾಡುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡಲಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲುಕು ಕಾರ್ಯದರ್ಶಿ ಡಿ.ಟಿ ಮುನಿಸ್ವಾಮಿ,ಖಜಾಂಚಿ ಜಿ.ಕೃಷ್ಣಪ್ಪ, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಚೆಂಚುರಾಯನಪಲ್ಲಿ ಕೃಷ್ಣಪ್ಪ,ಸಿ.ಐ.ಟಿ.ಯು ಮುಖಂಡ ಮುಸ್ತಫಾ "ಡಿ.ಎಚ್.ಎಸ್. ಮುಖಂಡ ಅಶ್ವಥಪ್ಪ,ಸೇರಿದಂತೆ ಮತ್ತಿತರರು ಇದ್ದರು.... ವರದಿ ಸುಬ್ಬು ಭಾಗ್ಯನಗರ
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
