ಕೊಡಿಗೇಹಳ್ಳಿ ದಲಿತರ ಸ್ಮಶಾನ ಜಮೀನಿಗಾಗಿ ಜೈಭೀಮ್ ಶ್ರೀನಿವಾಸ್ ಆಗ್ರಹ

May 9, 2026 - 16:33
 0  1
ಕೊಡಿಗೇಹಳ್ಳಿ ದಲಿತರ ಸ್ಮಶಾನ ಜಮೀನಿಗಾಗಿ ಜೈಭೀಮ್ ಶ್ರೀನಿವಾಸ್ ಆಗ್ರಹ

     ಬೇತಮಂಗಲ: ಕೊಡಿಗೇಹಳ್ಳಿ ಗ್ರಾಮದ ದಲಿತ ಸಮುದಾಯಕ್ಕೆ ಸ್ಮಶಾನ ಭೂಮಿ ಕೊರತೆಯಿದ್ದು ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ಜಮೀನು ಮಂಜೂರು ಮಾಡಬೇಕೆಂದು ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಒತ್ತಾಯಿಸಿದರು.

ಇಲ್ಲಿಗೆ ಸಮೀಪದ ವೆಂಗಸಂದ್ರ ಗ್ರಾಪಂ ವ್ಯಾಪ್ತಿಯ ಕೊಡಿಗೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು, ಕೊಡಿಗೇಹಳ್ಳಿ ಗ್ರಾಮದಲ್ಲಿ ದಲಿತರು ದಶಕಗಳಿಂದ ವಾಸವಿದ್ದು ಸತ್ತರೆ ಶವ ಸಂಸ್ಕಾರ ಮಾಡಲು ಸೂಕ್ತ ಜಾಗವಿಲ್ಲದೆ ಪರದಾಡುವಂತಾಗಿದೆ.  ರಸ್ತೆ ಬದಿ ಮತ್ತು ಖಾಸಗಿ ಜಮೀನುಗಳನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಾಗೆಯೇ ಇದೆ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದಂತ ದಲಿತ ರೈತ ನಾಗೇಶ್ ಹಾಗೂ ಸುತ್ತಮುತ್ತಲಿನ ರೈತರು  ಕೃಷಿ ಜಮೀನಿಗೆ ಹೋಗಲು ನಕಾಷೆಯಲ್ಲಿ ರಸ್ತೆ  ಇದ್ದು ಜಮೀನಿನಲ್ಲಿ ವ್ಯವಸಾಯ ಮಾಡಲು ಧನ ಕರುಗಳನ್ನು ಮೇಯಿಸಲು ಬೆಳೆದ ಪಸಲುನ್ನು ಮಾರುಕಟ್ಟೆಗೆ ರವಾನಿಸಲು ಸರಿಯಾದ ರಸ್ತೆ ಸೌಕರ್ಯ ವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ ಕೂಡಲೇ  ಸರ್ಕಾರ ಹಾಗೂ ಸಂಬಂಧ ಪಟ್ಟ ಕಂದಾಯ ಅಧಿಕಾರಿಗಳು ಎಚ್ಚೆತ್ತುಕೊಂಡು ನಕಾಷೆಯಲ್ಲಿರುವ ರಸ್ತೆಯನ್ನು ಗುರುತಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕು ಹಾಗೆಯೇ ದಲಿತರಿಗೆ ಸ್ಮಶಾನ ಜಾಗವನ್ನು ಗುರುತಿಸಿ  2 ಎಕರೆ ಸ್ಮಶಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಒಂದು ವಾರ ಗಡುವು: ಒಂದು ವೇಳೆ ಈ ಮೇಲಿನ ಎರಡು ಬೇಡಿಕೆಗಳನ್ನು ಈಡೇರಿಸದಿದ್ದರೆ  ಮುಂದಿನ ದಿನಗಳಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಇದೆ ಜಾಗದಲ್ಲಿ ಡಾ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.


ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಹಾಗೂ ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456