ಕೊಲೆ ಪ್ರಕರಣ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

Feb 27, 2026 - 23:32
 0  14
ಕೊಲೆ ಪ್ರಕರಣ ಮೂವರಿಗೆ ಜೀವಾವಧಿ ಶಿಕ್ಷೆ  ವಿಧಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಭಾಗ್ಯನಗರ: ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ.

ಪ್ರಕರಣದ ಸಾಕ್ಷಿದಾರರನ್ನು ವಿಚಾರಣೆ ಮಾಡಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀಧರ್ ಅವರು, ಅಪರಾಧಿಗಳಾದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಇದೇ 19ರಂದು ತೀರ್ಪು ಪ್ರಕಟಿಸಿದ್ದು, ಅದರಂತೆ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ 2023ರ ಡಿಸೆಂಬ‌ರ್ 6ರಂದು ಗಜೇಂದ್ರ ಎಂಬುವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಗಜೇಂದ್ರ ಅವರ ತಾಯಿ ವರಲಕ್ಷ್ಮಮ್ಮ 2023ರ ಡಿ.7ರಂದು ಬಾಗೇಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ಕೈಗೊಂಡ ಪೊಲೀಸರು, ಯಲ್ಲಂಪಲ್ಲಿ ಗ್ರಾಮದ ಸುರೇಂದ್ರಬಾಬು, ಶ್ರೀನಾಥ ಮತ್ತು ವೆಂಕಟೇಶ್‌ ಅವರನ್ನು ಬಂಧಿಸಿದ್ದರು.

ಈ ಮೂವರ ವಿರುದ್ಧ ದೋಷಾರೋಪವನ್ನು ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಅದರಂತೆ ಸುಮಾರು ವರ್ಷಗಳ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ವಿಧಿಸಲಾಗಿದೆ ಎಂದು ಪತ್ರಿಕಾ ಬಿಡುಗಡೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಎಸ್. ಪಿ. ಕುಶಾಲ್ ಚೌಕ್ಷೆ.... 

What's Your Reaction?

Like Like 2
Dislike Dislike 1
Love Love 0
Funny Funny 0
Angry Angry 0
Sad Sad 1
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456