ಗೊರೆಬಾಳ ಶರಣಬಸವೇಶ್ವರ ಜಾತ್ರೆಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ಗೊರೆಬಾಳ ಶರಣಬಸವೇಶ್ವರ ಜಾತ್ರೆಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ಗೊರೆಬಾಳ ಶರಣಬಸವೇಶ್ವರ ಜಾತ್ರೆಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದ ಶ್ರೀ ಶರಣಬಸವೇಶ್ವರ 45ನೇ ಜಾತ್ರಾ ಮಹೋತ್ಸವ ಅಂಗವಾಗಿ ನೆಡೆದ ಶ್ರೀ ಬಸವ ಪುರಾಣ ಪ್ರವಚನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ರಾಜ್ಯ ಘಟಕ ರಾಯಚೂರು ಹಾಗೂ ಗ್ರಾಮದ ಸರ್ವ ಭಕ್ತರ ಸಹಯೋಗದೊಂದಿಗೆ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ ಅವರು ಸಸಿನೆಟ್ಟು ನೀರುಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಕಾರ್ಯಕ್ರಮವನ್ನು ಮಂತ್ರಘೋಷಗಳೊಂದಿಗೆ ಸಸಿನೆಟ್ಟು ವಿಶೇಷ ಪೂಜೆ ಸಲ್ಲಿಸಿ ಅಕ್ಷತಾರೋಪಣ ಮಾಡಿ ನೀರುಣಿಸಲಾಯಿತು.ಹಿರಿಯರು ಯುವಕರೆಲ್ಲರೂ ಅತ್ಯಂತ ಉತ್ಸಾಹದಿಂದ ಕಾರ್ಯದಲ್ಲಿ ಭಾಗವಹಿಸಿ ವೃಕ್ಷ ಮಾತೆಯ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸದಸ್ಯರು, ಗ್ರಾಮದ ಹಿರಿಯರು ಯುವಕರು ಮಹಿಳೆಯರು ಭಾಗವಹಿಸಿದ್ದರು.