ಗೋಪಾಲಸ್ವಾಮಿ ಹುಟ್ಟುಹಬ್ಬ ಹಿನ್ನೆಲೆ ಆರೋಗ್ಯ ಶಿಬಿರ ಮತ್ತು ಕಬಡ್ಡಿ ಪಂದ್ಯ

ಚನ್ನರಾಯಪಟ್ಟಣ: ವಿಧಾನ ಪರಿಷತ್ ಮಾಜಿ ಶಾಸಕರಾದ ಎಂ.ಎ ಗೋಪಾಲಸ್ವಾಮಿ ಅವರ 55ನೇ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಇಂದು ಬೃಹತ್ ಆರೋಗ್ಯ ಮೇಳ ಹಾಗೂ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು.ಪಟ್ಟಣದ ಗಣಪತಿ ಪೆಂಡಾಲ್‌ನಲ್ಲಿ ನಡೆದ ಆರೋಗ್ಯ ಮೇಳಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಸ್ಥಳೀಯರು ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು,ತಮಗಿರುವ ಆರೋಗ್ಯ ಸಮಸ್ಯೆ ಬಗ್ಗೆ ವೈದ್ಯರಿಂದ ಪೂರಕ ಸಲಹೆ ಸೂಚನೆ ಪಡೆದುಕೊಂಡರು.
ಬಂದವರಿಗೆಲ್ಲ ಲಘು ಉಪಹಾರದ ವ್ಯವಸ್ಥೆ ಸಹ ಮಾಡಲಾಗಿತ್ತು.
ಪಂದ್ಯಾವಳಿಯನ್ನು ಗೋಪಾಲಸ್ವಾಮಿ ಅವರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕಬಡ್ಡಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಚಾಲನೆ ನೀಡಿದರು.ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ 16 ತಂಡಗಳು ಪಂದ್ಯಾವಳಿಯಲ್ಲಿ ಭಾಗಿಯಾಗಿವೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಗೆಲುವಿಗಾಗಿ 16 ತಂಡಗಳ ಆಟಗಾರರೂ ಪರಸ್ಪರ ಸೆಣೆಸಾಟ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರಿನರಾಜರಾಜೇಶ್ವರಿ ನಗರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮ, ಬಿಗ್ ಬಾಸ್ ಸ್ಪರ್ಧಿ ಐಶ್ವರ್ಯ ಸಿಂಧೋಗಿ ಸೇರಿದಂತೆ ಇತರರು ಹಾಜರಿದ್ದರು.ನೆರೆದಿದ್ದ ಸಾವಿರಾರು ಮಂದಿ ಕ್ರೀಡಾ ಪ್ರೇಮಿಗಳು ಪಂದ್ಯಾವಳಿಯ ರೋಚಕ ಕ್ಷಣಗಳನ್ನು ಕಣ್ಣುಂಬಿಕೊಂಡು ಆನಂದಿಸಿದರು. ಹಾಸನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರೂ ಆರೋಗ್ಯ ಶಿಬಿರದಲ್ಲಿ ಶುಭಾಶೀರ್ವಾದ ನೀಡಿದರು.ಈ ಸಂದರ್ಭದಲ್ಲಿ ಹಾಸನ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್, ಮಾಜಿ ಎಂಎಲ್‌ಸಿ ಹಾಗೂ ಕೆಡಿಪಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಹಾಸನ ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಪ್ಪ, ಕಾಂಗ್ರೆಸ್ ಮುಖಂಡರಾದ ಹೆಚ್. ಕೆ.ಮಹೇಶ್, ಮುರಳಿ ಮೋಹನ್, ಅಣತಿ ಆನಂದ್ , ಸಿ ಎಸ್ ಯುವರಾಜ್, ಎಂ ಕೆ ಮಂಜೇಗೌಡ , ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದ ಅಧ್ಯಕ್ಷರಾದ ಸಿ ಎನ್ ಅಶೋಕ್, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
What's Your Reaction?






