ಗೌರವ ಡಾಕ್ಟರೇಟ್ ಪದವಿ ಭಾಜನರಾದ ಸದಾಶಿವ ಶ್ರೀಗಳು ಹಾಗೂ ಸತೀಶ್ ಕುಲಕರ್ಣಿ 

Apr 8, 2026 - 20:02
 0  3
ಗೌರವ ಡಾಕ್ಟರೇಟ್ ಪದವಿ ಭಾಜನರಾದ ಸದಾಶಿವ ಶ್ರೀಗಳು ಹಾಗೂ ಸತೀಶ್ ಕುಲಕರ್ಣಿ 

ಹಾವೇರಿ: ಇತ್ತೀಚೆಗೆ ನಡೆದ ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಶ್ರೀ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ಸತೀಶ ಕುಲಕರ್ಣಿ ಅವರನ್ನು ಬುಧವಾರ ಅಭಿಮಾನಿಗಳು ಗೌರವಿಸಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಕೃತಕ ಬುದ್ದಿಮತ್ತೆ (Artificial Inteligence) ವಿಷಯವಾಗಿ ಶಾಲೆಗಳಲ್ಲಿ ಜಾಗೃತಿ ಮೂಡಿಸಿದ ಕೋಣನತಂಬಿಗಿ ಗ್ರಾಮದ ಡಿಪ್ಲೋಮಾ ವಿದ್ಯಾರ್ಥಿ ಕು. ಶಾಂತಯ್ಯ ವೀ. ಕುಲಕರ್ಣಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ವಿಜೇತರಾಗಿರುವುದಕ್ಕೆ ಶ್ರೀ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ಸತೀಶ ಕುಲಕರ್ಣಿ ಅವರು ಕು.ಶಾಂತಯ್ಯ ವೀ.ಕುಲಕರ್ಣಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರಲ್ಲದೇ, ಸಮಾಜಮುಖಿಯಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಹಾನಗಲ್ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿಜಯಕುಮಾರ ದೊಡ್ಡಮನಿ, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಎಸ್ ಕುಲಕರ್ಣಿ, ವಕೀಲರಾದ ಉಮೇಶ ಗವಳಿ,ನಾರಾಯಣ ಕಾಳೆ, ಅಣ್ಣಪ್ಪ ಚಿಕ್ಕಣ್ಣನವರ, ಸುರೇಶ ನಾಗಣ್ಣನವರ, ಸಿಕಂದರ್ ಹಾನಗಲ್, ಬಸಯ್ಯ ಬಳ್ಳಾರಿಮಠ, ಕು. ಶಾಂತಯ್ಯ ವೀ.ಕುಲಕರ್ಣಿ, ಪ್ರಮೀಳಾ ಜಿ. ಕುಲಕರ್ಣಿ, ರೇಣುಕಾ ಕಹಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456