ಗೌರಿಮಠದ ಶ್ರೀ ಮಲ್ಲಿಕಾರ್ಜುನ ಆಂಗ್ಲ ಮಾದ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಂಭ್ರಮ

Feb 22, 2026 - 17:31
 0  5
ಗೌರಿಮಠದ ಶ್ರೀ ಮಲ್ಲಿಕಾರ್ಜುನ ಆಂಗ್ಲ ಮಾದ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಂಭ್ರಮ

ಹಾವೇರಿ :-ನಗರದ ಕರಜಗಿ, ಗೌರಿಮಠದ ಶ್ರೀ ಮಲ್ಲಿಕಾರ್ಜುನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸರಸ್ವತಿ ಪೂಜಾ ಸಮಾರಂಭ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು.

     ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುದ್ದ ಪೂಜ್ಯ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ "ವಿದ್ಯಾ ಗುರೂಣಾo ಗುರು:" ಅಂದರೆ ವಿದ್ಯೆ ಮನುಷ್ಯನಿಗೆ ಸೌಂದರ್ಯವನ್ನು ಕರುಣಿಸುತ್ತದೆ.ಅದು ಗುಪ್ತವಾದ ಧನವಿದ್ದಂತೆ.ಭೋಗವನ್ನು ಯಶಸ್ಸನ್ನು ಕರುಣಿಸುತ್ತದೆ.ಅದು ಗುರುವಿನ ಗುರು ವಿದೇಶದಲ್ಲಿ ಬಂಧುವಿನಂತೆ ಸಹಾಯ ಮಾಡುತ್ತದೆ. ವಿದ್ವಾಂಸರು ಮಹಾರಾಜರಿಂದಲೂ ಪೂಜಿಸಲ್ಪಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯೆಯೆಂಬ ಸಂಪತ್ತನ್ನು ಪಡೆಯಬೇಕು ಎಂದ ಅವರು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಗುರು -ಹಿರಿಯರಿಗೆ ಹಾಗೂ ತಂದೆ -ತಾಯಿಯರನ್ನು ದೇವರೆಂದು ಪೂಜಿಸಿ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರಬೇಕು ಎಂದರು.

     ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾನೋ ವೈದ್ಯರಾದ ಡಾ. ವಿಜಯಕುಮಾರ ಬಳಿಗಾರ ಮಾತನಾಡಿ ವಿಶೇಷವಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವ ಕುರಿತು ವಿಶೇಷ ಉಪನ್ಯಾಸ ನೀಡಿದರು.

    ನಗರಸಭೆ ಸದಸ್ಯ ಬಾಬಣ್ಣ ಮೊಮಿನಗಾರ ಮಾತನಾಡಿ ಶ್ರೀಮಠದಲ್ಲಿ ಓದುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಸಂಸ್ಕಾರವಂತರಾಗಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗುತ್ತಾರೆ ಎಂದರು.

           ಡಾ. ಉಮಾ ಬಳಿಗಾರ ಮಾತನಾಡಿ ಮಕ್ಕಳು ಅರೋಗ್ಯದೊಂದಿಗೆ ಚೆನ್ನಾಗಿ ಅಭ್ಯಾಸ ಮಾಡಿ ಹೆಚ್ಚು ಅಂಕ ಪಡೆದುಕೊಳ್ಳಬೇಕು ಎಂದರು.

      ಹಾವೇರಿಯಿಂದ ಅಯೋಧ್ಯಗೆ ಸೈಕಲ್ ಯಾನ ಮಾಡಿದ ವಿವೇಕ ಇಂಗಳಗಿ ಮಾತನಾಡಿ ಸೈಕಲ್ ಯಾನದ ಅನುಭವ ಹಾಗೂ ಸಾಧನೆ ಕುರಿತು ಮಾತನಾಡಿದರು.

      ಮುಖ್ಯೋಪಾಧ್ಯಾಯರಾದ ಶ್ರೀ ಶಂಕರ ಅಕ್ಕಸಾಲಿ ಅವರು ಪ್ರಾಸ್ತಾ ವಿಕವಾಗಿ ಮಾತನಾಡಿ ಶಾಲೆಯ ವಾರ್ಷಿಕ ವರದಿ ನೀಡಿದರು.ಸಂಸ್ಥೆಯ ಕಾರ್ಯದರ್ಶಿ ಶ್ರೀ ಗುರುಸಿದ್ದಯ್ಯ ಹಿರೇಮಠ,ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಗಂಗಯ್ಯ ಕುಲಕರ್ಣಿ, ಮಾಲತೇಶ ಸಂಗೂರ ಮುಂತಾದವರು ಉಪಸ್ಥಿತರಿದ್ದರು.

    ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಮರಣೆಕೆ ನೀಡಿ ಗೌರವಿಸಲಾಯಿತು.

ಒಂದು ವಾರಗಳ ಕಾಲ ಜರುಗಿದ ವಿಜ್ಞಾನ ವಸ್ತು ಪ್ರದರ್ಶನ, ಕ್ರೀಡೆ ಇತ್ಯಾದಿ ಸಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿದವು. ಮಕ್ಕಳು, ಶಿಕ್ಷಕ-ಶಿಕ್ಷಕಿಯರು ಹಾಗೂ ಪಾಲಕರು ಹೆಸರುಬೆಳೆ ಪಾಯಸ ಹಾಗೂ ಪುಳೋಗೇರಿ ಸ್ವೀಕರಿಸಿ ಸಂಭ್ರಮಿಸಿದರು. ಕುಮಾರಿ ಮದುಶ್ರೀ ಬೊಮ್ಮನಕಟ್ಟಿ ನಿರೂಪಿಸಿದರು, ಕುಮಾರ ಮಹೇಶ ರಟ್ಟೀಹಳ್ಳಿ ವಂದಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456