ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ 

Apr 8, 2026 - 19:30
 0  1
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ 

ಭಾಗ್ಯನಗರ: ಗ್ರಾಮೀಣ ಭಾಗದ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಮಾರು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣವಾಗುತ್ತಿದೆ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದರೆ ಮಾತ್ರ ನಮ್ಮ ದೇಶ ಅಭಿವೃದ್ಧಿ  ಆಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ತಾಲೂಕಿನ ಬಹುದಿನಗಳ ಬೇಡಿಕೆಯಾಗಿದ್ದ ಬಾಗೇಪಲ್ಲಿ–ಚೇಳೂರು ಮುಖ್ಯ ರಸ್ತೆಯಿಂದ ನಲ್ಲಸಾನಂಪಲ್ಲಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಂಗಳವಾರ ಕೊತ್ತಕೋಟವಾಂಡ್ಲಪಲ್ಲಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು

ದಶಕಗಳಿಂದಲೂ ದುರಸ್ತಿಯಿಲ್ಲದೆ ಕುಂಟಿತವಾಗಿದ್ದ ಈ ರಸ್ತೆಯಿಂದಾಗಿ ಈ ಭಾಗದ ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಈ ರಸ್ತೆ ಅಭಿವೃದ್ಧಿಗೊಳ್ಳುವುದರಿಂದ ಮೂಗಿರೆಡ್ಡಿಪಲ್ಲಿ, ರಾಜುವಾಂಡ್ಲಪಲ್ಲಿ,ಕೊತ್ತಕೋಟವಾಂಡ್ಲಪಲ್ಲಿ,ನಲ್ಲಸಾನಂಪಲ್ಲಿ ಗ್ರಾಮಸ್ಥರಿಗೆ ಸಂಚಾರ ಅನುವು ಆಗಲಿದೆ ಹಾಗೂ ಗ್ರಾಮೀಣ ಭಾಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸುಗಮ ಸಂಚಾರ ವ್ಯವಸ್ಥೆ ಅತ್ಯಗತ್ಯ. ಈ ಕಾಮಗಾರಿಯು ತಕ್ಷಣವೇ ಆರಂಭವಾಗಲಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲಿದೆ. ಕಾಮಗಾರಿಯಲ್ಲಿ ಯಾವುದೇ ಹಂತದಲ್ಲೂ ರಾಜಿ ಮಾಡಿಕೊಳ್ಳದೆ ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಹಸೀಲ್ದಾರ್ ಶ್ವೇತ. ಬಿ.ಕೆ. ಇಒ ರಮೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಮಧು,ಲೋಕೋಪಯೋಗಿ ಇಲಾಖೆ ಲೋಕೇಶ್,ಕಾಂಗ್ರೆಸ್ ಮುಖಂಡರಾದ ಸಹದೇವರೆಡ್ಡಿ,ಜಾಲರಿ,ಸುರೇಂದ್ರ,ಪ್ರಭು,ಭೀಮ ನಾಯಕ್ ಸೇರಿದಂತೆ ವಿವಿಧ ಇಲಾಖೆಯ  ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456