ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ರೂಪಕಲಾ ಶಶಿಧರ್ ಚಾಲನೆ
ಬೇತಮಂಗಲ: ಕ್ಷೇತ್ರದ ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ಹಳ್ಳಿಗಳ ರಸ್ತೆ ಸಂಪರ್ಕವನ್ನು ಸುಧಾರಿಸಲಾಗುವುದು ಎಂದು ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.
ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಲ್ಲಿ 10 ಕೋಟಿ ನೀಡಿರುತ್ತಾರೆ ಹುಲ್ಕೂರು ಗ್ರಾಪಂ ವ್ಯಾಪ್ತಿಯ ಹಂಗಳ ಮುಖ್ಯರಸ್ತೆಯಿಂದ ಮಾರಸಂದ್ರ ವರೆಗೂ 44 ಲಕ್ಷ ವೆಚ್ಚ ಹಾಗೂ ರಾಮಸಾಗರ ಮುಖ್ಯ ರಸ್ತೆಯಿಂದ ಕೆರೆಮಿಂಡಹಳ್ಳಿ ವರೆಗೂ 19 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರ ದೈನಂದಿನ ಬದುಕು ಸುಗಮವಾಗಲು ಉತ್ತಮ ರಸ್ತೆ ಸಂಪರ್ಕ ಅತಿ ಅಗತ್ಯ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತೆರಳಲು ರಸ್ತೆಗಳು ಸುಸ್ಥಿತಿಯಲ್ಲಿರಬೇಕು. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯ ಒದಗಿಸುವುದೇ ನನ್ನ ಮುಖ್ಯ ಗುರಿ ಎಂದು ತಿಳಿಸಿದರು.
ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮದನ್ ಗೆ ಶಾಸಕರಿಂದ ಅಭಿನಂದನೆ: ಬೇತಮಂಗಲದ ಶ್ರೀ ಸಾಯಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ, ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಮದನ್ ಗಣನೀಯ ಸಾಧನೆ ಮಾಡಿದ್ದಾರೆ, ನನ್ನ ಕ್ಷೇತ್ರದ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ಆ ವಿದ್ಯಾರ್ಥಿಯ ವ್ಯಾಸಂಗಕ್ಕೆ ನನ್ನ ಸಹಕಾರ ಇರಲಿದೆ ಹಾಗೂ ಇನ್ನಷ್ಟು ಉನ್ನತ ಮಟ್ಟದ ಗುರಿಗಳನ್ನು ತಲುಪಲಿ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ, ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಜಿಪಂ ಮಾಜಿ ಸದಸ್ಯ ಅಮು ಲಕ್ಷ್ಮೀ ನಾರಾಯಣ್ ಮಾಜಿ ಗ್ರಾಪಂ ಅಧ್ಯಕ್ಷರಾದ ಸೊನ್ನಮ್ಮ ರಮೇಶ್, ಚಂದ್ರಪ್ಪ, ಕಾರಿ ಪ್ರಸನ್ನ, ಮುಖಂಡರಾದ ವಕೀಲ ಪದ್ಮನಾಭರೆಡ್ಡಿ, ರಮೇಶ್, ಕೇಶವ ರೆಡ್ಡಿ, ಆನಂದ್ ರೆಡ್ಡಿ ಹರೀಶ್, ಸೇರಿದಂತೆ ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
