ಚಾಮುಂಡಿ ಬೆಟ್ಟದ ಅಭಿವೃದ್ಧಿಗೆತೊಂದರೆ ನೀಡುವುದು ಸರಿಯಲ್ಲ: ತೇಜಸ್ವಿ ನಾಗಲಿಂಗ ಸ್ವಾಮಿ
ಚಾಮುಂಡಿ ಬೆಟ್ಟದಲ್ಲಿ ಪ್ರಸ್ತುತ ಪ್ರಸಾದ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸಿ ಕೆಲವರು ತೊಂದರೆ ನೀಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಯೋಜನೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಸರತಿ ಸಾಲು ಮಂಟಪ, ಶೌಚಾಲಯ, ಚಪ್ಪಲಿ ಸ್ಟ್ಯಾಂಡ್, ವೀಕ್ಷಣೆ ಕೇಂದ್ರಗಳು ಇತ್ಯಾದಿಗಳನ್ನು ನಿರ್ಮಿಸಲಾಗುತ್ತಿದೆ ಇದು ಉತ್ತಮ ಕಾರ್ಯ ಎಂದು ತೇಜಸ್ವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆದರೆ ಈ ಅಭಿವೃದ್ಧಿ ಕಾರ್ಯಗಳು ಪರಿಸರ ಮತ್ತು ಪಾರಂಪರಿಕತೆಗೆ ಹಾನಿ ಮಾಡುತ್ತಿವೆ ಎಂದು ಸ್ಥಳೀಯರು, ಪರಿಸರವಾದಿಗಳು ಮತ್ತು ಕೆಲವು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ,ಇದು ಸತಿಯಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಖಂಡಿಸಿದ್ದಾರೆ.
ಈಗಾಗಲೇ ಸರ್ಕಾರ ಪರಿಸರಕ್ಕೆ ಹಾನಿಯಾಗದಂತೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದರೂ ಸಹ ಕಾಮಗಾರಿಗಳು ಅವೈಜ್ಞಾನಿಕವಾಗಿ ನಡೆಯುತ್ತಿವೆ ಎಂದು ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ 45.70 ಕೋಟಿ ರೂ. ಅನುದಾನ ಮಂಜೂರಾಗಿದೆ, ಸುಗಮ ದರ್ಶನಕ್ಕಾಗಿ ಕಲ್ಲಿನ ಕ್ಯೂ ಮಂಟಪ ನಿರ್ಮಿಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ತೇಜಸ್ವಿ ತಿಳಿಸಿದ್ದಾರೆ.
ಮಹಿಷಾಸುರ ಪ್ರತಿಮೆ ವೃತ್ತವನ್ನು ಮಲ್ಟಿಪರ್ಪಸ್ ಸೆಂಟರ್ ಆಗಿ ಪರಿವರ್ತಿಸಲಾಗುತ್ತಿದೆ, ಅಲ್ಲಿ ಟಿಕೆಟ್ ಕೌಂಟರ್‌ಗಳು ಇರಲಿವೆ ಎಂದು ತಿಳಿದುಬಂದಿದೆ.
ಪಾರಂಪರಿಕ ಶೈಲಿಯ ಪ್ರವೇಶ ದ್ವಾರ, ಹೈಟೆಕ್ ಶೌಚಾಲಯ, ಚಪ್ಪಲಿ ಸ್ಟ್ಯಾಂಡ್ ನಿರ್ಮಾಣ, ಪ್ರಸ್ತುತ ವಿವ್ ಪಾಯಿಂಟ್ ಕೆಡವಿ, ಹೊಸ ವೀಕ್ಷಣೆ ಕೇಂದ್ರ ನಿರ್ಮಾಣ ಅದ್ಬುತವಾಗಿ ಇರುತ್ತದೆ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದು ತೇಜಸ್ವಿ ಅಭಿಪ್ರಾಯಪಟ್ಟಿದ್ದಾರೆ.
ಸ್ಥಳೀಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಂಗಡಿಗಳ ನಿರ್ಮಾಣದಲ್ಲಿ ಮೂಲ ಅಂಗಡಿ ಮಾಲೀಕರಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿರುವುದು ಉತ್ತಮ ಕಾರ್ಯ ಎಂದಿದ್ದಾರೆ.
ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ದುರಂತದ ಸಂಗತಿ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇದೆ ರೀತಿ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ನೀಡಿದರೆ ವಿರೋಧಿಸುತ್ತಿರುವವರ ವಿರುದ್ಧ ನಾವು ಸಹ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತೇಜಸ್ವಿ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತ ಈ ಯಾವುದೇ ಅಡೆ ತೊಡೆಗಳಿಗೆ ತಲೆಕೆಡಿಸಿ ಕೊಳ್ಳದೆ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
