ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

Dec 9, 2025 - 12:59
 0  3
ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

    ಬೆಂಗಳೂರು, 09: ವಾಹನ ತಪಾಸಣಾ,ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ರಾಜ್ಯದ ಪೊಲೀಸ್ ಮಹಾನಿರ್ದೇಶಕ, ಮಹಾನಿರೀಕ್ಷಕರಿಗೆ ಪತ್ರ ಬರೆದಿದ್ದಾರೆ!

ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು.

ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ, ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್ ಚಾಲಕನ ಮೇಲೆ ಪೊಲೀಸ್ ಪೇದೆಯಿಂದ ನಡೆದ ಹಲ್ಲೆಯು ರಾಜ್ಯಾದ್ಯಂತ ವೈರಲ್ ಆದ ಘಟನೆಯನ್ನು ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿರುತ್ತಾದರೂ ವಾರದ ಹಿಂದೆ ಚಿತ್ರದುರ್ಗದಲ್ಲಿ ವಾಹನ ಪರೀಶೀಲನೆ ವೇಳೆಯಲ್ಲಿ ಆಟೋ ಚಾಲಕನಿಗೆ ಪೊಲೀಸ್ ಸಿಬ್ಬಂದಿ ಕಿರುಕುಳ ನೀಡಿದ್ದರಿಂದ ಮನನೊಂದ ಚಾಲಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿದ್ದು, ವಾಹನ ತಪಾಸಣಾ,ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ ಸೂಕ್ತ ಸುತ್ತೋಲೆ, ನಿರ್ದೇಶನ ಹೊರಡಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ರಾಜ್ಯದ ಪೊಲೀಸ್ ಮಹಾನಿರ್ದೇಶಕ, ಮಹಾನಿರೀಕ್ಷಕರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ!

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456