ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಭರತನಾಟ್ಯ ನೃತ್ಯ ಪ್ರದರ್ಶಿಸಿದ ತಾನೀಶ್.ಎನ್

Sep 5, 2025 - 10:57
 0  7
ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಭರತನಾಟ್ಯ ನೃತ್ಯ ಪ್ರದರ್ಶಿಸಿದ ತಾನೀಶ್.ಎನ್

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನರಸಾಪುರ ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ನರಸಾಪುರ ಇವರ ಸಾರಥ್ಯದಲ್ಲಿ ನಡೆದ "ಚಿಗುರು" ಸಾಂಸ್ಕೃತಿಕ ಕಾರ್ಯಕ್ರಮ-2025 ಇದರ ಉದ್ಘಾಟನೆಯನ್ನು ಹದಿನೈದು  ವಿಶ್ವದಾಖಲೆಗಳ ಸರದಾರ, ಅಂತರರಾಷ್ಟ್ರೀಯ ಭರತನಾಟ್ಯ ಕಲಾವಿದ, ಹಾಗೂ ಹೊಯ್ಸಳ ಪ್ರಶಸ್ತಿ ಪುರಸ್ಕೃತ ಬಾಲಕ ಗ್ರ್ಯಾಂಡ್ ಮಾಸ್ಟರ್ ತಾನೀಶ್.ಎನ್ ರವರು ದೀಪವನ್ನು ಬೆಳಕಿಸುವ ಮೂಲಕ ಮಕ್ಕಳ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ತಾನೀಶ್.ಎನ್ ರವರು ಆಧ್ಯಾತ್ಮಿಕತೆಯನ್ನು ಪ್ರತಿಬಿಂಬಿಸುವ ಶಿವ ಪರಮಾತ್ಮನ ದೈವಿಕ ಗೀತೆಗೆ ಭರತನಾಟ್ಯ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮದ ಚಿಗುರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ ಸಾವಿರಾರು ಮಕ್ಕಳ ಪ್ರೀತಿಗೆ ಪಾತ್ರನಾದನು.

ಈ ಸಂದರ್ಭದಲ್ಲಿ  ವೇದಿಕೆಯಲ್ಲಿ  ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಎನ್ ವಿಜಯಲಕ್ಷ್ಮಿ 
ಶ್ವೇತಾಂಜಲಿ ಭರತನಾಟ್ಯ ಶಾಲೆ ಹಾಗೂ ವಿಶ್ವಮಾನವ ಕುವೆಂಪು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ತಾನೀಶ್.ಎನ್ ರವರ ತಾಯಿ ಶ್ರೀಮತಿ ಶ್ವೇತನಾಗರಾಜ್ , ತಂದೆ ಅರಳು ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಯುವಕವಿ ಲಕ್ಕೂರು ಎಂ.ನಾಗರಾಜ್ ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456