ಚಿರತೆ ಪ್ರತ್ಯಕ್ಷ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ-ಆತಂಕಕ್ಕೆ ಒಳಗಾದ ಸ್ಥಳೀಯ ನಿವಾಸಿಗರು

Mar 9, 2026 - 16:42
 0  11
ಚಿರತೆ ಪ್ರತ್ಯಕ್ಷ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ-ಆತಂಕಕ್ಕೆ ಒಳಗಾದ ಸ್ಥಳೀಯ ನಿವಾಸಿಗರು
ವರದಿ ಸುಬ್ಬು ಭಾಗ್ಯನಗರ

      ಭಾಗ್ಯನಗರ: ಪಟ್ಟಣದ ಹೊರವಲಯದ ಹೊಸಹೂಡ್ಯ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಶ್ರೀ ಸಾಯಿಕೃಪ ಲೇಔಟ್ ಪ್ರದೇಶದಲ್ಲಿ ಕಳೆದ 9 ಘಂಟೆಗೆ ರಾತ್ರಿ ಸಮಯದಲ್ಲಿ ಚಿರತೆ ಪತೃಕ್ಷವಾದ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಾತ್ರಿ ವೇಳೆ ಲೇಔಟ್‌ನ ಕೆಲವು ನಿವಾಸಿಗಳು ಲೇಔಟ್‌ನ ಗಿಡಗಂಟಿಗಳ ನಡುವೆ ಚಿರತೆ ಸಂಚರಿಸುತ್ತಿರುವುದನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆನಡೆಸಿ ಚಿರತೆಯನ್ನು ಪತ್ತೆಹಚ್ಚಲು ಹುಡುಕಾಟ ಆರಂಭಿಸಿದರು.

ಸ್ಥಳೀಯರ ಪ್ರಕಾರ, ಶ್ರೀ ಸಾಯಿಕೃಪ ಲೇಔಟ್‌ಗೆ ಹಾಕಿರುವ ಕಾಂಪೌಂಡ್ ಗೋಡೆ ಕೆಲವು ಕಡೆ ಕುಸಿದು ಹೋಗಿರುವುದರಿಂದ ಹೊರಗಿನಿಂದ ಕಾಡುಪ್ರಾಣಿಗಳು ಸುಲಭವಾಗಿ ಒಳನುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದಲೇ ಚಿರತೆ ಲೇಔಟ್ ಪ್ರದೇಶದೊಳಗೆ ಪ್ರವೇಶಿಸಿರುವ ಸಾಧ್ಯತೆ ಇದೆ ಎಂದು ನಿವಾಸಿಗಳು ಶಂಕಿಸಿದ್ದಾರೆ.

ಲೇಔಟ್ ಸುತ್ತಮುತ್ತ ಖಾಲಿ ಜಾಗಗಳು ಹಾಗೂ ಗಿಡಗಂಟಿಗಳು ಹೆಚ್ಚಾಗಿರುವುದ-ರಿಂದ ಚಿರತೆ ಕೆಲ ಸಮಯ ಅಲ್ಲಿ ಸಂಚರಿಸಿ ನಂತರ ಅಡಗಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರಿಂದಾಗಿ ಆ ಪ್ರದೇಶದ ನಿವಾಸಿಗಳಲ್ಲಿ ಭಯ ಮತ್ತು ಆತಂಕ ಹೆಚ್ಚಾಗಿದೆ.

ಮಾಹಿತಿ ಪಡೆದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಾತ್ರಿ ವೇಳೆಯಲ್ಲಿಯೇ ಸ್ಥಳದಲ್ಲಿ ಗಸ್ತು ಹೆಚ್ಚಿಸಿ ಪರಿಶೀಲನೆ ನಡೆಸಿದ್ದು. ಚಿರತೆಯ ಚಲನವಲನದ ಬಗ್ಗೆ ಹದ್ದಿನ ಕಣ್ಣು ಹರಿಸಿದ್ದಾರೆ. ಅಗತ್ಯವಿದ್ದರೆ ಚಿರತೆಯನ್ನು ಹಿಡಿಯಲು ಬಲೆ ಅಳವಡಿಸುವ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ರಾತ್ರಿ ವೇಳೆ ಅನಗತ್ಯವಾಗಿ ಹೊರಗೆ ಸಂಚರಿಸಬಾರದು. ಮಕ್ಕಳು ಹಾಗೂ ಪಶುಗಳನ್ನು ಹೊರಗೆ ಬಿಡಬಾರದು ಹಾಗೂ ಯಾವುದೇ ಅನುಮಾನಾಸ್ಪದ ಚಲನವಲನ ಕಂಡುಬಂದರೆ ತಕ್ಷಣವೇ ಮಾಹಿತಿ ನೀಡುವಂತೆ ಮನವಿ ಮಾಡಿದ್ದು,ಇದೇ ವೇಳೆ ಲೇಔಟ್ ನಿವಾಸಿಗಳು ಕುಸಿದಿರುವ ಕಾಂಪೌಂಡ್ ಗೋಡೆಯನ್ನು ಶೀಘ್ರ ದುರಸ್ತಿ ಮಾಡಬೇಕ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ. ಚಿರತೆ ಪ್ರತ್ಯಕ್ಷವಾದ ಘಟನೆ ಹಿನ್ನೆಲೆಯಲ್ಲಿ ಶ್ರೀ ಸಾಯಿಕೃಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಲ್ಲಿದ್ದಾರೆ.... 

ಈ ಸಂಧರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ, ವಲಯ ಅರಣ್ಯಧಿಕಾರಿ ವಾಸುದೇವ್, ಸಹಾಯಕ ವಲಯ ಅರಣ್ಯಧಿಕಾರಿ ಅಣ್ಣಪ್ಪಗೊಂಡ, ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.... 

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456