ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜೆ, ಅನ್ನದಾನ ಸೇವೆ ಮತ್ತು ನರ್ತನ ಸೇವೆ

ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರದ ಪ್ರಯುಕ್ತ ಬೆಳಗ್ಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ ಪಲ್ಲಕ್ಕಿ ಉತ್ಸವ, ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಕಾಮಾಕ್ಷಿ ಅವರ ನಿರ್ದೇಶನದಲ್ಲಿ ನೃತ್ಯ ದೇಗುಲ ಸ್ಕೂಲ್ ಆಫ್ ಡ್ಯಾನ್ಸ್ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.
What's Your Reaction?






