ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ

Aug 20, 2025 - 17:41
 0  1
ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ

ಕೆಜಿಎಫ್,ಆ.೨೦:  ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್‌ರೀಫ್ಸ್‌ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ, ಕೋಮು ಸೌಹಾರ್ದತೆಯ ಪ್ರತೀಕವಾಗಿ ಸದ್ಬಾವನಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸದ್ಬಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ಅಲ್ಲದೇ ವೈಯಕ್ತಿಕವಾಗಲೀ ಅಥವಾ ಸಾಮೂಹಿಕವಾಗಲೀ ನಮ್ಮಲ್ಲಿರುವ ಎಲ್ಲಾ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಸಹ ಪ್ರತಿಜ್ಞೆ ಮಾಡಲಾಯಿತು.
ಡಿವೈಎಸ್‌ಪಿ ಎಸ್ ಪಾಂಡುರಂಗ, ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಶಾಖಾಧೀಕ್ಷಕರಾದ ವಿ.ಗಿರೀಶ್, ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ, ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿಗಳು ಹಾಜರಿದ್ದರು.
ಚಿತ್ರ ಶಿರ್ಷಿಕೆ: ೨೦ಕೆಜಿಎಫ್೦೧: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ಸದ್ಬಾವನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್‌ಪಿ ಪಾಂಡುರಂಗ ಇತರರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456