ಜೆಡಿಎಸ್ ನೂತನ ಕಛೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಮಹತ್ವದ ಸಭೆ

Apr 8, 2026 - 19:56
 0  1
ಜೆಡಿಎಸ್ ನೂತನ ಕಛೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಮಹತ್ವದ ಸಭೆ
ವರದಿ: ಮಂಜುನಾಥ್.ಪಿ.ವಿ. ಬೇತಮಂಗಲ ಹೋಬಳಿ

ಕೆಜಿಎಫ್: ಮುಂಬರುವ ರಾಜಕೀಯ ಚುನಾವಣೆಗಳು ಹಾಗೂ ಪಕ್ಷದ ಸಂಘಟನೆಯ ಬಗ್ಗೆ ಕುರಿತು ನಗರದ ಜೆಡಿಎಸ್ ನೂತನ ಕಛೇರಿಯಲ್ಲಿ ಇಂದು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಮಹತ್ವದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಜೆಡಿಎಸ್ ನೂತನ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಡಾ.ರಮೇಶ್ ಬಾಬು ಅವರು ಉದ್ದೇಶಿಸಿ ಮಾತನಾಡಿದರು, ಪಕ್ಷದ ಬಲವರ್ಧನೆಗೆ ತಳಮಟ್ಟದಿಂದ ಕಾರ್ಯಕರ್ತರು ಸನ್ನದ್ಧರಾಗಬೇಕು. ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡುವುದರ ಜೊತೆಗೆ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗಬೇಕು ಎಂದು ಕರೆ ನೀಡಿದರು. 

ಕೆಜಿಎಫ್ ಕ್ಷೇತ್ರದಾದ್ಯಂತ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು  ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯನ್ನು ವಹಿಸಬೇಕು ಎಂದು ಸೂಚಿಸಿದರು.  

ಈ ವೇಳೆ ಜೆಡಿಎಸ್ ನಗರ ಘಟಕ ಅಧ್ಯಕ್ಷ ಲಿಯೋ ಜೋಸೆಫ್ ಮಾತನಾಡಿ ಕೆಜಿಎಫ್ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಇಲ್ಲ ಅಭಿವೃದ್ಧಿ ಶೂನ್ಯವಾಗಿದೆ ಕೆಜಿಎಫ್ ಕ್ಷೇತ್ರ ಅಭಿವೃದ್ಧಿಯಾಗಬೇಕೆಂದರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಇರಬೇಕು ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕಂದರೆ ನಾವು ಈಗಳಿಂದಲೇ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಹೇಳಿದರು. 

ಒಗ್ಗಟ್ಟಿನ ಪ್ರದರ್ಶನ: ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಬೇಕೆಂದರು. 

ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಯಾದ ಡಾ ರಮೇಶ್ ಬಾಬು, ನಗರ ಘಟಕ ಅಧ್ಯಕ್ಷರಾದ ಲಿಯೋಜೋಸೆಫ್ ಮಹಿಳಾ ಘಟಕ ಅಧ್ಯಕ್ಷೆ ಉಷಾ ಮುಖಂಡರಾದ ಬಾಲಚಂದ್ರ ಪಾಲ್, ಅಶೋಕ್ ನಾಯ್ಡು, ರಾಬರ್ಟ್, ಶ್ರೀಧರನ್, ಪ್ರಕಾಶ್, ಜೂನಿಯರ್ ಅಂಥೋನಿ, ಕಬಿಅರಸನ್, ಮುರಳಿ ವಿಗ್ನೇಶ್, ಸೇರಿದಂತೆ ಅನೇಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456