ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ  ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಿದ ಹಳೆಯ ವಿದ್ಯಾರ್ಥಿಗಳು 

Feb 1, 2026 - 18:20
 0  50
ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ  ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಿದ ಹಳೆಯ ವಿದ್ಯಾರ್ಥಿಗಳು 

ಕೃಷ್ಣರಾಜಪೇಟೆ : ತಾಲ್ಲೂಕಿನ ಗಡಿಬಾಗವಾದ ನಾರಾಯಣಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲ ವಾರ್ಷಿಕೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳು ಗರುವಂದನಾ ಮತ್ತು ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.... 


ಗುರುವಂದನಾ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ  ಸಿ ಆರ್ ಪಿ ಶ್ರೀಧರ್ , ಮತ್ತು ಶಿಕ್ಷಕರು  ಮಾತನಾಡಿದರು.ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ. ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು 30 ರಿಂದ 40 ವರ್ಷದ ನಂತರ ಒಂದೆಡೆ ಸೇರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಪಾಠ ಮಾಡಿದ ಗುರುಗಳು ಯಾವುದೇ ಅಪೇಕ್ಷೆ ಇಲ್ಲದೆ ಶಿಷ್ಯರ ಭವಿಷ್ಯ ರೂಪಿಸುತ್ತಾರೆ. ಜೀವನಕ್ಕೆ ಮಾರ್ಗದರ್ಶಕರಾಗುತ್ತಾರೆ. ಆದರೆ ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ದಂಡಿಸದೆ, ಶಿಕ್ಷಿಸದೆ ಪಾಠ ಮಾಡಬೇಕು ಎಂದು ಪಾಲಕರೇ ತಾಕೀತು ಮಾಡುತ್ತಾರೆ. ಇದು ಬೇಸರದ ಸಂಗತಿ ಎಂದರು

ನಿವೃತ್ತ ಶಿಕ್ಷಕ ಚನ್ನೇಗೌಡ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ಶ್ರೇಷ್ಠ ಮಟ್ಟದಲ್ಲಿ ಇರಬೇಕು ಎಂಬುದಕ್ಕಾಗಿ ಗುರುಗಳು ದಂಡಿಸುತ್ತಾರೆ. ಬಾಲ್ಯದಲ್ಲಿ ತಿದ್ದದೇ, ತಪ್ಪಿಗೆ ಶಿಕ್ಷೆ ನೀಡದೇ ಕಲಿಸುವ ಶಿಕ್ಷಣವು ನಿಜವಾದ ಶಿಕ್ಷಣವೇ ಅಲ್ಲ. ವಿದ್ಯಾರ್ಥಿಗಳ ಬದುಕು ಹಸನಾಗಲಿ ಎಂದು ಮಾತ್ರ ಶಿಕ್ಷಕರು ಬಯಸುತ್ತಾರೆ. ಈ ನಿಟ್ಟಿನಲ್ಲಿ ಇಂದಿನ ಶಿಕ್ಷಕ- ಪಾಲಕರ ಸಂಬಂಧ ಉನ್ನತೀಕರಣಗೊಳ್ಳಬೇಕು  ಗುರು ಋಣ ಮತ್ತು ಪಿತೃಋಣಗಳನ್ನು ಸಾಕಷ್ಟು ತೀರಿಸುವ ಕಾರ್ಯ ಮಾಡಬೇಕು. ಇದರಿಂದ ಉತ್ತರೋತ್ತರ ಸಾರ್ಥಕತೆಯನ್ನು ಸಂಭ್ರಮಿಸಬಹುದು ಎಂದು ಹೇಳಿದರು. 

ಒಟ್ಟಾರೆ ಸುಮಾರೂ ಐವತ್ತಕ್ಕೂ ಹೆಚ್ಚು ಶಿಕ್ಷರಿಗೆ ಸನ್ಮಾನಿಸಿ ಗೌರವಿಸಿದ್ರು  ಈ ಗುರುವಂದನಾ ಕಾರ್ಯಕ್ರಮದ ಮೂಲಕ ಹಳೆಯ ವಿಧ್ಯಾರ್ಥಿಗಳು ಒಂದಾಗಿ  ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಇಡಿ ಗ್ರಾಮವೇ ಸಂಭ್ರಮದ ವಾತಾವಣ ಸೃಷ್ಟಿಯಾಗಿತ್ತು..

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ವಿನುತಾ, ಸಹ ಶಿಕ್ಷಕರಾದ ಜಿರಂಜೀವಿ,  ಅಂಗನವಾಡಿ ಕಾರ್ಯಕರ್ತೆ  ಧನಲಕ್ಷ್ಮಿ, ಎಸ್ ಡಿ ಎಂ ಸಿ ಅಧ್ಯಕ್ಷರು ಶೀಲಾ,ಉಪಾದ್ಯಕ್ಷ ಮಂಜೇಶ್, ಗ್ರಾಮದ ಮುಖಂಡರು ಕೃಷ್ಣಸಿಂಗ್, ಚನ್ನೇಗೌಡ, ಮಹಾದೇವ, ಶಾಲೆಯ  ಹಳೆಯ ವಿಧ್ಯಾರ್ಥಿಗಳಾದ  ಅಗ್ನಿಶಾಮಕದಳ ಅಧಿಕಾರಿ, ಹರೀಶ್, ಉದ್ಯಮಿ, ಹರೀಶ್ ಎನ್.ಎಸ್,  ಪೋಲೀಸ್ ಇಲಾಖೆಯ ದೀಪು, ಬಾಬು, ಮಲ್ಲಿಕಾ,  ತನುಜಾ, ಲೋಕೇಶ್, ರಾಜು, ಅಶ್ಚಿನಿ, ಗೀರಿಶ್, ಅಭಿಸಿಂಗ್,ಪುಷ್ಪಲತಾ,  ವಿಶ್ವನಾಥ್, ಅಭಿಲಾಶ್ ಸಿಂಗ್,  ಸಿಮ್ಮಂತ್ ಸಿಂಗ್, ಪರಮೇಶ್,ಶಿವರಾಜು, ಮನು, ವಿಣಾ, ಶೈಲಜಾ, ರೂಪ ಶ್ರೀ,  ಕೀರ್ತನ, ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರುಗಳು ಇದ್ದರು

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456