ಡಾ|| ಕೆ.ಆರ್.ರವಿಕುಮಾರ ಅವರು ಭಾರತ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ

Jan 1, 2026 - 17:24
 0  18
ಡಾ|| ಕೆ.ಆರ್.ರವಿಕುಮಾರ ಅವರು ಭಾರತ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು : ಕರ್ನಾಟಕ ಪ್ರೆಸ್ ಕ್ಲಬ್ ಪ್ರತಿ ವರ್ಷವು ನಾಡಿನ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. ೨೦೨೫ನೇ ಸಾಲಿನ ಸಾಧಕರ ಸಮಾಗಮ ಕಾರ್ಯಕ್ರಮವು ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ೨೦೨೬ನೇ ಜನವರಿ ೧೩ ರಂದು ಸಂಜೆ ೪.೩೦ ಗಂಟೆಗೆ ರಾಜ್ಯದ ಗಣ್ಯರ ವೇದಿಕೆಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಾಡಿನ ೧೧ ಸಾಧಕರಿಗೆ ಭಾರತ ಸೇವಾ ರತ್ನ ಪ್ರಶಸ್ತಿಯನ್ನು ಪವಾಡ ಶ್ರೀ ಬಸವಣ್ಣ ದೇವರ ಮಠದ ಪೀಠಾದ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ವಿರೋಧ ಪಕ್ಷದ ಮುಖಂಡರಾದ ಶ್ರೀ ಆರ್.ಅಶೋಕ ಮತ್ತು ಲೋಕಸಭಾ ಸದಸ್ಯರಾದ ಶ್ರೀ ಪಿ.ಸಿ ಮೋಹನ ಸೇರಿದಂತೆ ಹಲವಾರು ಮುಖ್ಯ ಅತಿಥಿಗಳ ಅಮೃತ ಹಸ್ತದಿಂದ ವಿತರಿಸಲಾಗುತ್ತದೆ. ರಾಜ್ಯದ ಸಾಧಕ ರತ್ನಗಳಲ್ಲಿ ಒಂದಾಗಿ ಡಾ|| ಕೆ.ಆರ್.ರವಿಕುಮಾರ ರವರು ಬಳ್ಳಾರಿಯಲ್ಲಿ ೧೯೭೮ರಲ್ಲಿ ಜನಿಸಿ, ಎಂ.ಬಿ.ಬಿ.ಎಸ್ ವ್ಯಾಸಂಗ ಮುಗಿಸಿ ಕಲ್ಕತ್ತಾದಲ್ಲಿ ಎ.ಎಂ ವಿಶೇಷ ಅಧ್ಯಯನ ಮಾಡಿ, ಬಳ್ಳಾರಿಯಲ್ಲಿ ಜನಸ್ನೇಹಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಆರೋಗ್ಯ ಶಿಬಿರಗಳು ಮತ್ತು ಬಡವರಿಗೆ ಉಚಿತ ಅಥವಾ ಕಡಿಮೆ ದರದಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಯುತರ ಆರೋಗ್ಯ ಕ್ಷೇತ್ರ ಮತ್ತು ಸಾಮಾಜಿಕ ಸೇವೆಗಾಗಿ ಕರ್ನಾಟಕ ಪ್ರೆಸ್ ಕ್ಲಬ್‌ನÀ ಭಾರತ ಸೇವಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಆಯ್ಕೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456