ಡಾ. ಸಿದ್ಧಲಿಂಗೇಶ ಹಂಡಿಗಿ ಅವರಿಗೆ "ಸೇವಾ ಸ್ಫೂರ್ತಿ" ರಾಜ್ಯ ಪ್ರಶಸ್ತಿ

Apr 7, 2026 - 11:39
 0  12
ಡಾ. ಸಿದ್ಧಲಿಂಗೇಶ ಹಂಡಿಗಿ ಅವರಿಗೆ "ಸೇವಾ ಸ್ಫೂರ್ತಿ" ರಾಜ್ಯ ಪ್ರಶಸ್ತಿ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ನವಲಗುಂದ: ಸಾಹಿತಿ, ಶಿಕ್ಷಕ ಡಾ. ಸಿದ್ಧಲಿಂಗೇಶ ಸಂ. ಹಂಡಿಗಿ ಅವರಿಗೆ " ಸೇವಾ ಸ್ಫೂರ್ತಿ " ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಪರಿಷತ್ತು, ಭಾರತ ಜ್ಞಾನ ವಿಜ್ಞಾನ ಸಮಿತಿ, ಪರಿಸರ ಪ್ರೇಮ ತಂಡ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಜರುಗಿದ ಅದ್ದೂರಿ ಕಾರ್ಯಕ್ರಮದಲ್ಲಿ ಡಾ ಹಂಡಿಗಿ ಅವರಿಗೆ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ, ಪರಿಸರ ಜಾಗೃತಿ ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಅಖಿಲ ಭಾರತ ಶಿಕ್ಷಕರ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ, ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಫ್. ಸಿ. ಚೇಗರಡ್ಡಿ, ಜಿಲ್ಲಾ ಅಧ್ಯಕ್ಷ ಗುರು ತಿಗಡಿ, ಪರಿಸರ ಪ್ರೇಮ ತಂಡದ ಸಂಚಾಲಕ ಎಲ್. ಐ.ಲಕ್ಕಮ್ಮನವರ, ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷೆ ಶ್ರೀಮತಿ ರಮಾ ಆರ್. ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪರ್ವೀನ್ ಭಾನು ಬುಳ್ಳಣ್ಣವರ, ಕೋಶಾಧ್ಯಕ್ಷ ಎಂ.ಆರ್.ಮಲ್ಲಿಕಾರ್ಜುನ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲಿಂಗರಾಜ ಅಂಗಡಿ,ಡಯಟ್ ನ ನಿವೃತ್ತ ಉಪನ್ಯಾಸಕ ಕೆ.ಜಿ.ದೇವರಮನಿ, ಪ್ರಮುಖರಾದ ರಾಜಶೇಖರ ಹೊನ್ನಪ್ಪನವರ, ಶಂಕರ ಘಟ್ಟಿ ಮತ್ತಿತರರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456