ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ನೇತೃತ್ವದಲ್ಲಿ ಕೋವಿಡ್ ತುರ್ತು ಕಾರ್ಯಪಡೆ ಸಭೆ

May 30, 2025 - 17:25
May 30, 2025 - 18:10
 0  7
ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ನೇತೃತ್ವದಲ್ಲಿ ಕೋವಿಡ್ ತುರ್ತು ಕಾರ್ಯಪಡೆ ಸಭೆ

ಬಾಗೇಪಲ್ಲಿ: ಕೊರೊನಾ ಕಾರ್ಯಪಡೆಯ ಸದಸ್ಯರು ಹಾಗೂ ನೋಡಲ್‌ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪಟ್ಟಣ ಮತ್ತು ಗ್ರಾಮೀಣ (ಟಾಸ್ಕ್ಪೋರ್ಸ್ ) ಕಾರ್ಯಪಡೆಗಳ  ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪಟ್ಟಣದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಕಾರ್ಯಪಡೆಯನ್ನು ರಚಿಸಲಾಗಿದೆ. ಜೊತೆಗೆ ಕಾರ್ಯಪಡೆಯ ನಿರ್ವಹಣೆಗೆಂದು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಕೊರೊನಾ ಕಾರ್ಯಪಡೆಯ ಸದಸ್ಯರು ಹಾಗೂ ನೋಡಲ್‌ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಹಾಗೂ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ವಿವಿಧ ರೀತಿಯ ಮುoಜಾಗೃತ ಕ್ರಮಗಳನ್ನು ಕೈಗೊಂಡಿದ್ದು ಕೋವಿಡ್ ಗೆಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಕಾರ್ಯಪಡೆ ಸಿಬ್ಬಂದಿ ಮತ್ತು ನೋಡಲ್ ಅಧಿಕಾರಿಗಳು ಎಚ್ಚರ ವಹಿಸಿ ಅಪಡೇಟ್ ಮಾಡಬೇಕು ಎಂದರು..

ಈ ಸಭೆಯಲ್ಲಿ ತಾಲ್ಲೂಕು ಅರೋಗ್ಯ ಆಡಳಿತಧಿಕಾರಿ ಸತ್ಯನಾರಾಯಣರೆಡ್ಡಿ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಿ.ವಿ.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ,ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ,ಸಿ.ಡಿ.ಪಿ.ಓ ರಾಮಚಂದ್ರ, ಸೇರಿದಂತೆ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು,ನೋಡಲ್ ಅಧಿಕಾರಿಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456