ದೀಪೋತ್ಸವದೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ಮೆರವಣಿಗೆ

Aug 15, 2025 - 17:24
 0  2
ದೀಪೋತ್ಸವದೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ಮೆರವಣಿಗೆ

ಚನ್ನರಾಯಪಟ್ಟಣ: ಗಾಂಧಿ ವೃತ್ತದಲ್ಲಿರುವ ರಾಯರ ರಂಗಮಂದಿರದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಡಾ.ಸುಭುದೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ  ಮಧ್ಯರಾದನೆಯೆಂದು ಸಂಜೆ ನೂರಾರು ಮಹಿಳೆಯರೊಂದಿಗೆ ಭವ್ಯರಥದ ಮೇಲೆ ಶ್ರೀ ರಾಘವೇಂದ್ರ ಸ್ವಾಮಿಗಳವರನ್ನು ಕೂರಿಸಿ ದೀಪೋತ್ಸವದ ಮೂಲಕ ಚನ್ನರಾಯಪಟ್ಟಣದ ಗಾಂಧಿ ವೃತ್ತದಿಂದ ಶನೇಶ್ವರ ದೇವಸ್ಥಾನ ಮಾರ್ಗವಾಗಿ ಕೆ.ಆರ್ ಸರ್ಕಲ್ ಮಾರ್ಗವಾಗಿ ಪೊಲೀಸ್ ಠಾಣೆ ಮುಖಾಂತರ ರಾಯರ ಮಂದಿರಕ್ಕೆ ಮುಕ್ತಾಯಗೊಂಡಿತು.  ಉತ್ತರ ಆರಾಧನೆ ದಿನದಂದು ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್  ಸೂರಜ್ ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮ ಬಾಲಕೃಷ್ಣ,  ಮಾಜಿ ಪುರಸಭಾ ಅಧ್ಯಕ್ಷರಾದ ಬನಶಂಕರಿ ರಘು ಸೇರಿದಂತೆ ನೂರಾರು ಗಣ್ಯರು ಶ್ರೀ ರಾಘವೇಂದ್ರ ಸ್ವಾಮಿಗಳವರ ದರ್ಶನ ಪಡೆದ ಧನ್ಯರಾದರು. ರಾಘವೇಂದ್ರ ಸ್ವಾಮಿಗಳ ಆರಾಧನೆಯ ಅಂಗವಾಗಿ ಮೂರು ದಿನಗಳ ಕಾಲ ನಡೆದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಿಂದ  ಆಗಮಿಸಿದ 150ಕ್ಕೂ ಹೆಚ್ಚು ಕಲಾವಿದರು ನೃತ್ಯ ಪ್ರದರ್ಶನ ಮಾಡುವ ಮೂಲಕ ರಾಯರ ಸೇವೆ  ಮಾಡಿದರು.ಮೂರು ದಿನಗಳ ಕಾಲ ಸಹಸ್ರಾರು ಭಕ್ತರಿಗೆ ಅನ್ನದಾನವನ್ನು ಮಾಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456