ದೇವರಾಜು ಅರಸು ದಾಖಲೆ ಸರಿಗಟ್ಟಿದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಾಚರಣೆ

Jan 7, 2026 - 15:01
 0  6
ದೇವರಾಜು ಅರಸು ದಾಖಲೆ ಸರಿಗಟ್ಟಿದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಾಚರಣೆ

   ಸಂತೆಮರಹಳ್ಳಿ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ  ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಗೆ ತೆಳ್ಳನೂರು ಗ್ರಾಮದ ಕನಕ ಅಭಿಮಾನಿ ಬಳಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಟಿ ಎಸ್ ಕುಮಾರ್ ಮಾತನಾಡಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರ ಸುದೀರ್ಘ ಆಡಳಿತದಲ್ಲಿ ಯಾವುದೇ ಕಪ್ಪು ಚುಕ್ಕಿ ಬಾರದೆ ಆಡಳಿತ ಮಾಡಿದ ದಕ್ಷ ಮುಖ್ಯ ಮಂತ್ರಿ ಎನಿಸಿಕೊಂಡಿದ್ದಾರೆ.

ಅರಸು ಮುಖ್ಯ ಮಂತ್ರಿ ದಾಖಲೆ ಸರಿಗಟ್ಟಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಹಾಗೂ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದದಿಂದ ದೇವರಾಜು ಅರಸು ದಾಖಲೆ ಮುರಿಯಲು ಸಾಧ್ಯವಾಗಿದೆ ಹಾಗೂ ಮುಂಬರುವ ಅವಧಿಗೆ ಬಡವರು,  ಹಿಂದುಳಿದ ವರ್ಗಗಳ ಹಾಗೂ ದೀನ ದಲಿತರ ಪರವಾಗಿ ನಿಂತು ಕೆಲಸ ಮಾಡಲಿ ಎಂದು ಹಾರೈಸೋಣ ಎಂದರು.

ಈ ಸಂದರ್ಭದಲ್ಲಿ ಬಂದಿರುವಂತಹ ಅಭಿಮಾನಿಗಳಿಗೆ ನಾಟಿ ಕೋಳಿ ಪಲಾವ್ ಹಾಗೂ ಬಾಡು ಊಟ ನೀಡಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ್, ಲೋಕೇಶ್, ಗಿರೀಶ್, ಮಹದೇವೇಗೌಡ, ರೇಣುಕಾ, ನಾಗೇಶ್, ಸತೀಶ್, ಟಿ ಕೆ ಶಿವಣ್ಣ, ಗೌತಮ್ಮ್, ಟಿ ಆರ್ ರಾಮಸ್ವಾಮಿ ಭಾಗಿಯಾದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456