ದೊಡ್ಡ ಚಿನ್ನಲ್ಲಿ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Jan 30, 2026 - 15:45
 0  6
ದೊಡ್ಡ ಚಿನ್ನಲ್ಲಿ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

      ಕೆಜಿಎಫ್: ದೊಡ್ಡ ಚಿನ್ನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷನು 77ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ , ಧ್ವಜಾರೋಹಣವನ್ನು ನೆರವೇರಿಸಲಾಯಿತು. ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಗಣ್ಯರಿಂದ ಸಲ್ಲಿಸಲಾಯಿತು.

 ಅದೇ ಶಾಲೆಯ ಹಳೆಯ ವಿದ್ಯಾರ್ಥಿಗಳು ಆಗಿರುವ ಎ ಎಸ್ ಐ. ಹನುಮಪ್ಪ. ಪ್ರತಿವರ್ಷದಂತೆ ತಾವು ಓದಿರುವ ಶಾಲೆಯ ಹಳೆಯ ನೆನಪುಗಳ ಮೂಲಕ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ಮಾಡಿ ಶಾಲಾ ಮಕ್ಕಳಿಗೆ ಸಿಹಿ. ನೋಟ್ ಪುಸ್ತಕ. ವಿತರಣೆ ಮಾಡಿ. ಕನ್ನಡ ಶಕ್ತಿ ಕೇಂದ್ರ ಜಿಲ್ಲಾ ಅಧ್ಯಕ್ಷರು. ಬಾ. ಹ .ಶೇಖರಪ್ಪ ರವರಿಗೆ ಕನ್ನಡ ಶಾಲು ಹಾಗೂ ಹಣ್ಣುಗಳ ಬುಟ್ಟಿಯನ್ನು ನೀಡಿ ಸನ್ಮಾನ ಮಾಡುವ ಮೂಲಕ ಸ್ವಾಗತಿಸಲಾಯಿತು.

ಬಾ ಹ.ಶೇಖರಪ್ಪ ಮಾತನಾಡಿ ಸರ್ಕಾರಿ ಶಾಲೆಯಗಳನ್ನು ಉಳಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು. ಸರ್ಕಾರಿ ಶಾಲೆಯ ಉಳಿತರೆ ಕನ್ನಡ ಭಾಷೆ ಉಳಿಯುತ್ತದೆ. ಈಗಾಗಲೇ ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚಲು ಕಾದು ಕುಳಿತಿದೆ. ಅದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಯನ್ನು ಮುಚ್ಚಬಾರದು. ಅದೇ ರೀತಿಯಾಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಬೇಕು. ಕನ್ನಡ ಭಾಷೆ .ನೆಲ. ಜಲ. ವಿಷಯ ಬಂದಾಗ ಪ್ರತಿಯೊಬ್ಬ ಕನ್ನಡಿಗನು ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ನಿಲುವನ್ನು ಖಂಡಿಸಬೇಕು ಎಂದು ಹೇಳಿದರು. 

ಮಕ್ಕಳು ಓದುವ ಕಡೆ ಗಮನ ಹರಿಸಬೇಕು. ಮೊಬೈಲ್ ವ್ಯಾಮೋಹ ಬಿಟ್ಟು. ದೇಸಿ  ಕ್ರೀಡೆಗಳ ಬಗ್ಗೆ ಗಮನಹರಿಸಬೇಕು. ಆಗ ಮನಸ್ಸು ಸದೃಢವಾಗಿರುತ್ತದೆ ಆರೋಗ್ಯವಂತರಾಗಿರುತ್ತಾರೆ ಎಂದು ಮಕ್ಕಳಿಗೆ ತಿಳಿ ಹೇಳಿದರು.
 ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿನ ಮಾಡಿದ್ದು, ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456