ನಾಗಲಾಪುರ ಮಠದ ಶ್ರೀಗಳಿಂದ ಶ್ರಾವಣ ಮಾಸ ಆಚರಣೆ

Jul 23, 2025 - 10:35
 0  7
ನಾಗಲಾಪುರ ಮಠದ ಶ್ರೀಗಳಿಂದ ಶ್ರಾವಣ ಮಾಸ ಆಚರಣೆ

ಕೋಲಾರ,ಜು.೨೨: ಕೋಲಾರ ತಾಲ್ಲೂಕು, ನರಸಾಪುರ ಸಮೀಪದ ನಾಗಲಾಪುರ ಗ್ರಾಮದ ಶ್ರೀಮದ್ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀಗಳಿಂದ ೧೩ನೇ ವರ್ಷದ ಶ್ರಾವಣ ಶಿವಸಂಜೆ ಶಿವಾನುಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶ್ರೀಮದ್ ರಂಬಾಪುರಿ ಪೀಠದ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನ್ನಿದ್ಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವಶಾಂತಿ, ಲೋಕಕಲ್ಯಾಣಾರ್ಥವಾಗಿ ವಿಶ್ವವಸುನಾಮ ಸಂವತ್ಸರ ಶ್ರಾವಣ ಮಾಸದ ಮನೆ ಮನೆಗಳಲ್ಲಿ ಶ್ರಾವಣ ಶಿವಸಂಜೆ, ಮಹಾ ಶಿವಪೂಜೆ ಶಿವಾನುಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಶ್ರಾವಣ ಮಾಸದ ಪ್ರಥಮ ದಿನವಾದ ಜು.೨೫ರ ಶುಕ್ರವಾರದಂದು ಸಂಜೆ ೫ ಗಂಟೆಗೆ ಕೋಲಾರದ ಅರಳೇಪೇಟೆಯಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಇಷ್ಟಲಿಂಗ ಶಿವಪೂಜೆ ಯೊಂದಿಗೆ ಪ್ರಾರಂಭೋತ್ಸವ ನಡೆಯುವುದು, ಅದೇ ರೀತಿ ಶ್ರಾವಣ ಮಾಸದ ಕೊನೆಯ ದಿನವಾದ ಆ.೨೨ ರಂದು ಶುಕ್ರವಾರ ಸಂಜೆ ನಾಗಲಾಪುರ ಮಠದಲ್ಲಿ ಶ್ರಾವಣ ಶಿವಸಂಜೆಯ ಸಮಾರೋಪ ಸಮಾರಂಭವು ಇಷ್ಟಲಿಂಗ ಮಹಾಪೂಜೆಯೊಂದಿಗೆ ನಡೆಯುವುದು.
ಜು.೨೫ ರಿಂದ ಆ.೨೨ರ ತನಕ ತಿಂಗಳು ಪೂರ್ತಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿದೆಡೆಗಳಲ್ಲಿ ಮನೆ ಮನೆಗಳಲ್ಲಿ ಶ್ರಾವಣ ಶಿವಪೂಜೆ ಶಿವಾನುಭವ ಕಾರ್ಯಕ್ರಮವನ್ನು ನಾಗಲಾಪುರ ಮಠಾಧ್ಯಕ್ಷರಾದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನ್ನಿದ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರಾವಣ ಶಿವಸಂಜೆ ಶಿವಾನುಭವ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಭಗವಂತಹ ಕೃಪೆಗೆ ಪಾತ್ರರಾಗಲು ಶ್ರೀಮದ್ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಪ್ರಕಟಣೆಯಲ್ಲಿ ಕೋರಲಾಗಿದೆ.
 
ಚಿತ್ರಶಿರ್ಷಿಕೆ: ೨೨ನಾಗಲಾಪುರ೦೧: ಶ್ರೀ ಶ್ರೀ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ನಾಗಲಾಪುರ ಮಠ, ಕೋಲಾರ ತಾಲ್ಲೂಕು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456