ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ

Jun 6, 2025 - 15:29
 0  10
ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ

June 6, 202 ಮೈಸೂರು: ನಾಲ್ವಡಿ ಪ್ರಶಸ್ತಿ ವಿಚಾರವಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕಮಿಟಿ ಸದಸ್ಯರು ಕನ್ನಡ ಹೋರಾಟಗಾರರ ನ್ನು ಕಡೆಗಣಿಸಿದ್ದಾರೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.

ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಹಾಗೂ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ವಿಷಯದಲ್ಲಿ ಸಾಧನೆ ಮಾಡಿ ಕೊಡುಗೆ ನೀಡಿ ಹೋರಾಟ ಮಾಡಿರುವ ವರಿಗೆ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.

ಆದರೆ ನಿನ್ನೆ ನಡೆದ ೨೦೨೫ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿವಿಧ ಜಿಲ್ಲೆಗಳ ಇಪ್ಪತ್ತು ಜನರಿಗೆ ರಾಜ್ಯ ಮಟ್ಟದ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಆದರೆ ಯಾವೊಬ್ಬ ಕನ್ನಡ ಹೋರಾಟಗಾರರಿಗೆ ಈಬಾರಿ ಪ್ರಶಸ್ತಿ ನೀಡದೆ ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದು ಅಕ್ಷಮ್ಯ ಅಪರಾಧ ಕನ್ನಡ ಹೋರಾಟಗಾರರಿಗೆ ಮಾಡಿದ ಅಪಮಾನ ಎಂದು ತೇಜಸ್ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಜಿಲ್ಲೆಯ ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿದ್ದಾರೆ ಈ ಜಿಲ್ಲೆಗಳಲ್ಲಿ ಒಬ್ಬರು ಕೂಡ ಹೋರಾಟಗಾರರು ನಿಮ್ಮ ಕಣ್ಣಿಗೆ ಕಾಣಲಿಲ್ಲ ವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತೇಜಸ್ವಿ ಪ್ರಶ್ನೆ ಮಾಡಿದ್ದಾರೆ.

ಇದು ಕನ್ನಡಪರ ಹೋರಾಟಗಾರರಿಗೆ ಮಾಡಿದ ಅಪಮಾನ. ಕೂಡಲೇ ಮೈಸೂರು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರಿಗೆ ತೇಜಸ್ವಿ ಮನವಿ ಮಾಡಿದ್ದಾರೆ.

ಈ ಕುರಿತು ತಂಗಡಗಿ ಅವರಿಗೆ ಪತ್ರ ಬರೆಯುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಏಳು ಜನರಿಗೆ ಸಮಾಜ ಸೇವೆ ಎಂದು ಪ್ರಶಸ್ತಿ ನೀಡಿದ್ದೀರಿ ಇದರಲ್ಲಿ ಒಬ್ಬರಿಗಾದರು ಕನ್ನಡ ಹೋರಾಟಗಾರರಿಗೆ ನೀಡ ಬಹುದಾಗಿತ್ತು. ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದು ಏಕೆ ಎಂಬುದನ್ನು ಬಹಿರಂಗವಾಗಿ ಹೇಳಿಕೆ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತೇಜಸ್ವಿ ಆಗ್ರಹಿಸಿದ್ದಾರೆ.

ಕಮಿಟಿಯ ಸದಸ್ಯರುಗಳಾದರು ಸಹಾಯಕ ನಿರ್ದೇಶಕರಿಗೆ ಒಬ್ಬ ಕನ್ನಡ ಹೋರಾಟಗಾರರಿಗಾದರೂ ನಾಲ್ವಡಿ ಪ್ರಶಸ್ತಿಯನ್ನು ನೀಡಬೇಕೆಂದು ತಿಳಿಸಬೇಕಿತ್ತು ಯಾತಕ್ಕಾಗಿ ತಿಳಿಸಲಿಲ್ಲ ಎಂದು ಪ್ರಶ್ನಿಸಿ ಕೂಡಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಈ ಕಮಿಟಿಯನ್ನು ವಜಾಗೊಳಿಸಿ ಹೊಸ ಕಮಿಟಿ ರಚಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಕನ್ನಡ ಹೋರಾಟಗಾರರ ಕಡೆಗಣನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರೇ ನೇರ ಹೊಣೆ, ಈ ಹಿಂದೆ ಕೂಡ ರೌಡಿ ಶೀಟರ್ ಒಬ್ಬನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅವಾಂತರ ಉಂಟು ಮಾಡಿ ರಾಜ್ಯ ಮಟ್ಟದಲ್ಲಿ ಮೈಸೂರು ಜಿಲ್ಲೆಯ ಮಾರ್ಯದೆ ತೆಗೆದಿದ್ದರು ಕೂಡಲೇ ಇವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಬಾರಿಯ ನಾಲ್ವಡಿ ಪ್ರಶಸ್ತಿ ಯಲ್ಲಿ ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದಕ್ಕೆ ದಿಕ್ಕಾರವಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಖಂಡಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456