ನೀರಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ  ಬಿದ್ದಿರುವ ಹಸು ಜೀವಂತ ರಕ್ಷಣೆ

Nov 11, 2025 - 13:11
 0  10
ನೀರಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ  ಬಿದ್ದಿರುವ ಹಸು ಜೀವಂತ ರಕ್ಷಣೆ

  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ರೆಡ್ಡೆಣ್ಣ  ಎಂಬುವವರ ಹೋಲದಲ್ಲಿ ಅಂದಾಜು 10 ಅಡಿ ಅಗಲ,15 ಅಡಿ ಉದ್ದ ಹಾಗು14 ಅಡಿ ಆಳದ ತೇರೆದ ನೀರಿರುವ ಕೃಷಿ ಹೊಂಡದಲ್ಲಿ  ಆಕಸ್ಮಿಕವಾಗಿ ಹಸು ಕಾಲು ಜಾರಿ  ಬಿದ್ದಿದ್ದು, ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು  ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆಯ ನಿಯಂತ್ರಣ ಕೊಠಡಿಗೆ ದೇವರಾಜರವರು ದೂರವಾಣಿಗೆ ಕರೆ ಮಾಡಿ ತಿಳಿಸಿದರು.

ಕರೆ ಬಂದ ತಕ್ಷಣ ಜಲವಾಹನದೊಂದಿಗೆ  ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 14 ಅಡಿ ಆಳದ ನೀರಿರುವ ಕೃಷಿ ಹೊಂಡದಲ್ಲಿ   ನಿಚ್ಚಣಕಿ,ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 00:50 ಐವತ್ತೂ  ನಿಮಿಷಗಳ ಕಾಲ ಶ್ರಮವಹಿಸಿ ಸಿಬ್ಬಂದಿಯವರುಗಳು ಹಸುವನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ತಮ್ಮನಾಯಕನಹಳ್ಳಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ಹಸುವಿನ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಶ್ರೀ ಕರಿಯಣ್ಣ. ಎಸ.ಕೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿರವರ ನೇತ್ರತ್ವದಲ್ಲಿ, ರವೀಂದ್ರ ಸಂಗಮ,  ನಾಗಪ್ಪ ಶಿವಾಪುರ,ಸಿದ್ದಪ್ಪ ಜರಳಿ, ರವಿಚಂದ್ರ.ಬಾನೋಶಿ, ಮಲ್ಲಿಕಾರ್ಜುನ ಕಾಡಪ್ಪನವರ ಹಾಗೂ ಗಣೇಶ್ ಬಿರ ಗೌಡ.ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456