ನೂರಾರು ಜನರ ತ್ಯಾಗ ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಲಕ್ಷ್ಮೀದೇವಿ

ತಾ.ಪಂ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 13 ತಿಂಗಳು 2 ದಿನ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಕಲ್ಯಾಣ ಕರ್ನಾಟಕ ಸ್ವತಂತ್ರವಾಗಲು ನಡೆದ ಹೋರಾಟ, ತ್ಯಾಗ ಬಲಿದಾನ ಪ್ರತೀಕ ಈ ಕಲ್ಯಾಣ ಉತ್ಸವ ಎಂದು ತಾ.ಪಂ ಇಓ ಲಕ್ಷ್ಮೀದೇವಿ ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಜನರು ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದರೇ, ನಂತರ ನಮ್ಮದೇ ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆಯಬೇಕಾಯಿತು. ಕಲ್ಯಾಣ ಕರ್ನಾಟಕ ಸೇರಿ ಇತರೆ ಪ್ರಾಂತ್ಯಕ್ಕೆ ಸ್ವಾತಂತ್ರ್ಯ ಸಿಗಲು ಕಾರಣೀಭೂತರಾಗಿದ್ದು ಭಾರತ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ರವರು ಎಂದರು.
ನಿಜಾಮರ ಆಡಳಿತಕ್ಕೆ ವಿರಾಮ ಹಾಕಲು ಆಪರೇಷನ್ ಪೋಲೋ ಹೆಸರಿನಲ್ಲಿ ಮಿಟಲಿಟರಿ ಕಾರ್ಯಾಚರಣೆ ನಡೆಸಲಾಯಿತು. ಮಿಲಿಟರಿ ಮುಂದೆ ಈ ಹಜಾಕಾರರು ಉಳಿಯಲಿಲ್ಲ. 1948ರ ಸೆಪ್ಟೆಂಬರ್ 17 ರಂದು ನಿಜಾಮರ ಆಡಳಿತ ಕೊನೆಗೊಂಡು ಈ ಪ್ರದೇಶಗಳಿಗೆ ನಿಜವಾದ ಸ್ವಾತಂತ್ರ್ಯ ದೊರಕಿತು. ಅಂದಿನಿಂದ ಕಲ್ಯಾಣ ಕರ್ನಾಟಕ ಉತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತ ಬಂದಿದೆ ಎಂದರು.
ವಿಶ್ವಕರ್ಮ ಜಯಂತಿ ಆಚರಣೆ: ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಶ್ರೀ ಗುರು ಭಗವಾನ್ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.
ತಾ.ಪಂ ಯೋಜನಾಧಿಕಾರಿ ರಾಘವೇಂದ್ರ, ಸಹಾಯಕ ನಿರ್ದೇಶಕಿ ವೈ.ವನಜಾ, ಕೆಡಿಪಿ ನಾಮನಿರ್ದೇಶಿತ ಸದಸ್ಯರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು, ತಾ.ಪಂ ವಿವಿಧ ಯೋಜನೆಗಳ ವಿಷಯ ನಿರ್ವಾಹಕರು, ನರೇಗಾ, ಎನ್.ಆರ್.ಎಲ್.ಎಮ್ ವಿಭಾಗ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
What's Your Reaction?






