ಪಟ್ಟಣದಲ್ಲಿ ಸರ್ಕಾರಿ ಐಟಿಐ ಕಾಲೇಜನ್ನು ತರುವಂತೆ ಒತ್ತಾಯಿಸಿದ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್

Jan 13, 2026 - 11:39
 0  50
ಪಟ್ಟಣದಲ್ಲಿ ಸರ್ಕಾರಿ ಐಟಿಐ ಕಾಲೇಜನ್ನು ತರುವಂತೆ ಒತ್ತಾಯಿಸಿದ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್

ಚಿಕ್ಕನಾಯಕನಹಳ್ಳಿ: ಸರ್ಕಾರಿ ಪ್ರೌಢಶಾಲೆ ಶಿಕ್ಷಕರಾದ ಸುರೇಶ್ ರವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕುಟುಂಬಕ್ಕೆ ಸಾಂತ್ವಾನ ಸಲ್ಲಿಸುವ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಭೇಟಿ ನೀಡಿದ್ದ ಅವರು ಪ್ರವಾಸಿ ಮಂದಿರದಲ್ಲಿ ನೆರೆದಿದ್ದ ಮಾದ್ಯಮದವರು ಹಾಗೂ ಮುಖಂಡರೊಂದಿಗೆ ಮಾತನಾಡಿದರು.

       ತಾಲ್ಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವು ಉತ್ತಮವಾಗಿರುವುದರಿಂದ ಪ್ರಶಂಸಿದರು. ಕ್ಷೇತ್ರದಲ್ಲಿ ಶಾಲೆಗಳ ದುರಸ್ತಿ ಮತ್ತು ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. 512 ಶಾಲೆಗಳ ನಿರ್ಮಾಣದ ಅವಶ್ಯಕತೆಯಿದ್ದು 232 ಶಾಲೆಗಳ ನಿರ್ಮಾಣ ಕಾರ್ಯವಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಮಾತನಾಡಿ, ಪಟ್ಟಣದಲ್ಲಿ ಸರ್ಕಾರಿ ಐಟಿಐ ಹಾಗೂ ಡಿಪ್ಲೊಮೊ ಕಾಲೇಜಿನ ಬಗ್ಗೆ ಸರ್ಕಾರದಲ್ಲಿ ಮಟ್ಟದಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿದರು.

 ಈ ಬಗ್ಗೆ ಪ್ರಸ್ತಾಪಿಸಿದ ಡಿ.ಟಿ.ಶ್ರೀನಿವಾಸ್, ಸರ್ಕಾರಿ ಐಟಿಐ ಹಾಗೂ ಡಿಪ್ಲೊಮೊ ಕಾಲೇಜಿನ ಬಗ್ಗೆ ಪ್ರಸ್ತಾವನೆ ನೀಡಿದರೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿ ಇಂದು ತಳಮಟ್ಟದ ಶಿಕ್ಷಣ ಇಲ್ಲವಾಗಿದೆ, ನಮ್ಮ ಕಾಲದಲ್ಲಿ ಆರಂಭದ ಶಿಕ್ಷಣವೇ ಉತ್ತಮವಾಗಿತ್ತು. ಖಾಸಗಿ ಶಾಲೆಗಳು, ಇಂಗ್ಲೀಷ್ ಮಾಧ್ಯಮ ಶಾಲೆಗಳ ಪ್ರಭಾವಕ್ಕೆ ಒಳಗಾದ ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ನಿರಾಸಕ್ತರಾಗಿದ್ದರು. ಆದರೆ ಇತ್ತೀಚೆಗೆ ಸರ್ಕಾರಿ ಕೆ.ಪಿ.ಎಸ್.ಸಿ ಶಾಲೆಗಳು ತಳಮಟ್ಟದಲ್ಲಿ ಗಟ್ಟಿಯಾಗುತ್ತಿವೆ ಹಾಗೂ ಇಪ್ಪತ್ತು ಅಂಶಗಳ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಿದರೆ ಮಕ್ಕಳ ಶಿಕ್ಷಣ ಉತ್ತಮವಾಗುವುದರಲ್ಲಿ ಸಂದೇಹವಿಲ್ಲ, ಈ ಬಗ್ಗೆ ಶಿಕ್ಷಕರು ಹೆಚ್ಚು ಗಮನ ಹರಿಸುವಂತೆ ಸೂಚಿಸಿದರು.

ಈ ವೇಳೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ರವರನ್ನು ತಹಶೀಲ್ದಾರ್ ಮಮತ ಹೂಗುಚ್ಛ ನೀಡಿ ಸ್ವಾಗತಿಸಿದರು.

 

       ಈ ಸಂದರ್ಭದಲ್ಲಿ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ.ಚಿಕ್ಕಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗವಿರಂಗಯ್ಯ, ಮುಖಂಡರುಗಳಾದ ಬೇವಿನಹಳ್ಳಿ ಚನ್ನಬಸವಯ್ಯ, ವಿಜಯ್ ಕುಮಾರ್ ಸೇರಿದಂತೆ ಹಲವರು ಇದ್ದರು.

 

ಚಿಕ್ಕನಾಯಕನಹಳ್ಳಿ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ರವರನ್ನು ತಹಶೀಲ್ದಾರ್ ಮಮತ ಹೂಗುಚ್ಛ ನೀಡಿ ಸ್ವಾಗತಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456